ದೇಶ

ಕೊರೋನಾ ಸೋಂಕು ಪೀಡಿತ ದೆಹಲಿ ಆರೋಗ್ಯ ಸಚಿವರಿಗೆ ಪ್ಲಾಸ್ಮಾ ಚಿಕಿತ್ಸೆ: ಆರೋಗ್ಯ ಸ್ಥಿರ

Manjula VN

ನವದೆಹಲಿ: ಕೊರೋನಾ ಸೋಂಕಿಗೆ ತುತ್ತಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. 

ಜೈನ್ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾದ ಹಿನ್ನೆಲೆಯಲ್ಲಿ ಶುಕ್ರವಾರ ಮ್ಯಾಕ್ಸ್ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಗಿದ್ದು, ಪ್ಲಾಸ್ಮಾ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿತ್ತು. ಚಿಕಿತ್ಸೆ ಬಳಿಕ ಇದೀಗ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. 

ಜೈನ್ ಅವರಿಗೆ ಕೊರೋನಾ ಸೋಂಕಿರುವುದು ಬುಧವಾರ ದೃಡವಾಗಿತ್ತು. ಅಷ್ಟೇ ಅಲ್ಲದೆ, ಅವರು ನ್ಯುಮೋನಿಯಾದಿಂದಲೂ ಬಳಲುತ್ತಿದ್ದು, ಆಮ್ಲಜನಕ ಪ್ರಮಾಣ ತೀವ್ರ ಕುಸಿತ ಕಂಡಿತ್ತು. 

SCROLL FOR NEXT