ದೇಶ

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: ಓರ್ವ ಉಗ್ರರನ್ನು ಸದೆಬಡಿದ ಸೇನೆ

Manjula VN

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ. 

ಉಗ್ರರು ಅಡಗಿಕುಳಿತಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಪಡೆಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್'ಪಿಎಫ್ ಪಡೆಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು. 

ಇದರಂತೆ ಶೋಪಿಯಾನ್ ಜಿಲ್ಲೆಯ ಲಾಕಿಪುರ್ ನಲ್ಲಿ ನಡೆಸಲಾದ ಎನ್'ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೀಗ ಹತ್ಯೆಯಾದ ಉಗ್ರನ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಸೇನಾಪಡೆ ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದವರೆದಿದೆ ಎಂದು ವರದಿಗಳು ತಿಳಿಸಿವೆ. 

ಸೊಪೋರ್'ನಲ್ಲಿ 3 ಎಲ್ಇಟಿ ಉಗ್ರರ ಬಂಧನ
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಸೊಪೋನಾ ನಲ್ಲಿ ಪೊಲೀಸರು ಹಾಗೂ ಸಿಆರ್'ಪಿಎಫ್ ಯೋಧರು ಮೂವರು ಎಲ್ಇಟಿ ಉಗ್ರ ಸಂಘಟನೆಯ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆ. 

ಸೊಪೋರ್'ನ ಬೊಮೀ/ಟಾರ್ಝೂ ಎಂಬಲ್ಲಿ ಕಾರ್ಯಾಚರಣೆ ನಡೆಸಿ, ಮೂವರು ಉಗ್ರರನ್ನು ಬಂಧಿಸಲಾಗಿದೆ. ಬಳಿಕ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಬಂಧಿತ ಉಗ್ರರನ್ನು ಶಬೀರ್ ಅಹ್ಮದ್ ಮಿರ್, ಮೊಹಮ್ಮದ್ ಅಬ್ಬಾರ್ ಮಿರ್ ಹಾಗೂ ಫಾಹಿಮ್ ನಬಿ ಭಟ್ ಎಂದು ಗುರ್ತಿಸಲಾಗಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

SCROLL FOR NEXT