ಸಂಗ್ರಹ ಚಿತ್ರ 
ದೇಶ

ಶ್ರೀನಗರದ ಝಾದಿಬಾಲ್'ನಲ್ಲಿ ಎನ್ಕೌಂಟರ್: 3 ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಶ್ರೀನಗರದ ಝಾದಿಬಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಶ್ರೀನಗರ: ಶ್ರೀನಗರದ ಝಾದಿಬಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಝಾದಿಬಾಲ್'ನಲ್ಲಿರುವ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು. ಇದರಂತೆ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. 

ಕಾರ್ಯಾಚರಣೆ ಕುರಿತು ಶ್ರೀನಗರ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದು, ಮೂವರು ಉಗ್ರರ ಪೈಕಿ ಇಬ್ಬರು ಉಗ್ರರು ಸ್ಥಳೀಯರಾಗಿದ್ದಾರೆಂದು ತಿಳಿಬಂದಿತ್ತು. ಕೂಡಲೇ ಅವರ ಪೋಷಕರೊಂದಿಗೆ ಮಾತುಕತೆ ನಡೆಸಿ, ಶರಣಾಗುವಂತೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದೆವು. ಆದರೆ, ಪೋಷಕರ ಮನವಿ ಬಳಿಕವೂ ಶರಣಾಗಲು ಅವರು ಒಪ್ಪುತ್ತಿಲ್ಲ. ಶರಣಾಗಲು ಎರಡೂವರೆ ಗಂಟೆಗಳ ಕಾಲ ಕಾಲಾವಕಾಶ ನೀಡಲಾಗಿತ್ತು. ಆದರೂ ಅವರು ಶರಣಾಗುತ್ತಿಲ್ಲ ಎಂದು ಹೇಳಿದ್ದಾರೆ. 

ಇದೀಗ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತವರೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಮೂವರಲ್ಲಿ ಇಬ್ಬರು ಉಗ್ರರು 2019ರಿಂದಲೂ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಕಳೆದ ತಿಂಗಳು ಇಬ್ಬರು ಬಿಎಸ್ಎಫ್ ಯೋಧರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್​ಫ್ರೆಂಡ್​!