ದೇಶ

ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ

ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ.  ರಥಯಾತ್ರೆ"ಸೂಕ್ಷ್ಮವಾಗಿ ನಿರ್ವಹಿಸಲು" ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ.

ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ.  ರಥಯಾತ್ರೆ"ಸೂಕ್ಷ್ಮವಾಗಿ ನಿರ್ವಹಿಸಲು" ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ.

ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ ನೇರ ಪ್ರಸಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. 

ಜೂನ್ 18  ರಂದು ನೀಡಿದ್ದ ತನ್ನ ತೀರ್ಪನ್ನು ಬದಲಾಯಿಸಿ ಈ ಸಂಬಂಧ ಸುಪ್ರೀಂ ಕೋರ್ಟ್ ನ್ಯಾಯಪೀಠ ಆದೇಶಿಸಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ರಥಯಾತ್ರೆ ನಡೆಸಲು ಅನುಮತಿ ನೀಡಲು ಸುಪ್ರೀಂಕೋರ್ಟ್ ಈ ಮೊದಲು ನಿರಾಕರಿಸಿತ್ತು. 

ಲಾಕ್ ಡೌನ್ ನಿರ್ಬಂಧಗಳನ್ನು ಉಲ್ಲಂಘಿಸಿ ರಥಯಾತ್ರೆ ನಡೆಸಿದರೆ ಆ ದೇವರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಈ ಹಿಂದೆ ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.

ಸಾಮಾಜಿಕ ಅಂತರ ನಿಬಂಧನೆಗಳಿಗೆ ಪ್ರಾಮುಖ್ಯತೆ ಕಲ್ಪಿಸಲು ಯಾತ್ರೆ ನಿರ್ವಹಣೆಯಲ್ಲಿ ಯಂತ್ರಗಳು , ಅನೆಗಳ ಬಳಕೆ ಬಗ್ಗೆ ಹೈಕೋರ್ಟ್ ಒಲವು ತೋರಿಸಿರುವುದು ದೇಗುಲದ ಸತ್ ಸಂಪ್ರದಾಯ ಹಾಗೂ ಕಾಯ್ದೆಗೆ ವಿರುದ್ದ ಎಂದು ಆರ್ಜಿದಾರರರ ವಾದಕ್ಕೆ ಸಮ್ಮತಿ ವ್ಯಕ್ತಪಡಿಸಿದ್ದ ನ್ಯಾಯಪೀಠ ಜೂನ್ ೧೮ ರಂದು ಪುರಿ ಜಗನ್ನಾಥ್ ರಥ ಯಾತ್ರೆಗೆ ತಡೆಯಾಜ್ಞೆ ವಿಧಿಸಿ ಆದೇಶಿಸಿತ್ತು.

ಇದೀಗ ಕೋರ್ಟ್ ಅನುಮತಿ ದೊರೆತ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭುವನೇಶ್ವರದಲ್ಲಿ ಇಂದು ಸಂಜೆ 5 ಗಂಟೆಗೆ ರಥಯಾತ್ರೆ ಪೂರ್ವಸಿದ್ಧತಾ ಸಭೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT