ಪುರಿ ಜಗನ್ನಾಥ ರಥೋತ್ಸವದ ಸಾಂದರ್ಭಿಕ ಚಿತ್ರ 
ದೇಶ

ಪುರಿ ಜಗನ್ನಾಥ ರಥಯಾತ್ರೆ ತಡೆ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ

ಐತಿಹಾಸಿಕ ಪುರಿ ಜಗನ್ನಾಥ ರಥೋತ್ಸವಕ್ಕೆ ತಡೆ ನೀಡಿದ್ದನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದೆ.

ನವದೆಹಲಿ: ಐತಿಹಾಸಿಕ ಪುರಿ ಜಗನ್ನಾಥ ರಥೋತ್ಸವಕ್ಕೆ ತಡೆ ನೀಡಿದ್ದನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ನಡೆಯಲಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಐತಿಹಾಸಿಕ ಯಾತ್ರೆ ಈ ವರ್ಷ ನಡೆಸಬಾರದೆಂದು ಸುಪ್ರೀಂ ಕೋರ್ಟ್ ಕಳೆದ 18ರಂದು ಆದೇಶ ನೀಡಿತ್ತು. ಈ ಆದೇಶ ಹೊರಬಂದ ಮರುದಿನ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಆದೇಶದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ ರಥಯಾತ್ರೆಗೆ ಅನುವು ಮಾಡಿಕೊಡಬೇಕೆಂದು ಮನವಿ ಸಲ್ಲಿಸಲಾಗಿತ್ತು.

ಒಡಿಶಾದ ಪುರಿ ಜಗನ್ನಾಥ ರಥ ಯಾತ್ರೆ ಪ್ರತಿವರ್ಷ 10ರಿಂದ 12 ದಿನಗಳ ಕಾಲ ನಡೆಯುತ್ತದೆ, ಲಕ್ಷಾಂತರ ಜನರು ಈ ಯಾತ್ರೆಗೆ ಸಾಕ್ಷಿಯಾಗುತ್ತಾರೆ. ಜೂನ್ 23ಕ್ಕೆ ನಿಗದಿಯಾಗಿದ್ದ ಬಹುದ ಜಾತ್ರೆಯನ್ನು ನಂತರ ಜುಲೈ 1ಕ್ಕೆ ಮುಂದೂಡಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ನೀಡಿ ಈ ವರ್ಷ ರಥಯಾತ್ರೆ ನಡೆಸುವುದು ಬೇಡ ಎಂದು ಆದೇಶ ಕೊಟ್ಟಿತು.

ಜಗನ್ನಾಥ, ಬಾಲಭದ್ರ ಮತ್ತು ದೇವಿ ಸುಭದ್ರ ಮೂರ್ತಿಗಳನ್ನು ಭವ್ಯವಾದ ಮರದ ರಥದಲ್ಲಿ ಕೂರಿಸಿ ಸಾವಿರಾರು ಮಂದಿ ಭಕ್ತರು ಮೂರು ಕಿಲೋ ಮೀಟರ್ ದೂರದಿಂದ 9 ದಿನಗಳ ಉತ್ಸವದಲ್ಲಿ 2 ಬಾರಿ ರಥ ಎಳೆಯುತ್ತಾರೆ.

ಪುರಿ ಜಗನ್ನಾಥ ಎಂದರೆ ಸಾವಿರಾರು ಮಂದಿಯ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿದ ವಿಷಯವಾಗಿದ್ದು, ರಥ ಯಾತ್ರೆಯನ್ನು ಈ ವರ್ಷ ರದ್ದುಪಡಿಸುವ ಬದಲು ಬದಲಾವಣೆಗಳನ್ನು ಮಾಡಿ ಅನುಮತಿ ಕೊಡಬೇಕೆಂದು ಜಗನ್ನಾಥ ಸಂಸ್ಕೃತಿ ಜನ ಜಾಗರಣ ವೇದಿಕೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ವೋಟ್ ಚೋರಿಯಿಂದ ಕಾನೂನು ಚೋರಿ' : ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು,EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆ

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು, Video

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗಕ್ಕೆ BJP ಶಾಸಕ ಪತ್ರ: ಬಿಕೆ ಹರಿಪ್ರಸಾದರಿಂದ ದಾಖಲೆ ಬಿಡುಗಡೆ!

ದೇಶಾದ್ಯಂತ ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರ ಹೆಸರು ಡಿಲೀಟ್! ಅವರ ಮಕ್ಕಳ ಗತಿಯೇನು? CEC ವಿರುದ್ಧ ದೂರು ದಾಖಲಿಸಿದ TMC ಸಂಸದೆ