ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಶಾಲಾ, ಕಾಲೇಜ್ ಗಳು ಬಂದ್: ಮಮತಾ ಬ್ಯಾನರ್ಜಿ

ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಶಾಲಾ, ಕಾಲೇಜ್ ಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲು ನಿರ್ಧರಿಸಿದೆ.

ಕೋಲ್ಕತಾ: ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಶಾಲಾ, ಕಾಲೇಜ್ ಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲು ನಿರ್ಧರಿಸಿದೆ.

ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜ್ ಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥಾ ಚಟರ್ಜಿ ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಸರ್ಕಾರ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಕಾಲೇಜ್ ಗಳು ಹಾಗೂ ವಿಶ್ವವಿದ್ಯಾಲಯಗಳ ಎಲ್ಲಾ ತರಗತಿಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್ 14 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 569ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು ಮತ್ತೆ 413 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 14,358ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ