ಮಹಾರಾಷ್ಟ್ರ: 24 ಗಂಟೆಗಳಲ್ಲಿ 3214 ಹೊಸ ಸೋಂಕಿತರ ದಾಖಲು, 248 ಸೋಂಕಿತರ ಸಾವು!
ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 3214 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಮುಂಬೈ: ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 3214 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಹೌದು.. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 3214 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,39,010ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 2 ದಿನಗಳ ಅಂತರದಲ್ಲಿ ್ಮಹಾರಾಷ್ಟ್ರದಲ್ಲಿ248 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 6531ಕ್ಕೆ ಏರಿಕೆಯಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 1925 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 69,631ಕ್ಕೆ ಏರಿಕೆಯಾಗಿದೆ.
ಮುಂಬೈ ಮಹಾನಗರಿಯೊಂದರಲ್ಲೇ ನಿನ್ನೆ 846 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 68,481ಕ್ಕೆ ಏರಿಕೆಯಾಗಿದೆ. ಈ ಪೈಕಿ 34,576 ಸೋಂಕಿತರು ಗುಣಮುಖರಾಗಿದ್ದು. 30,063 ಸಕ್ರಿಯ ಪ್ರಕರಣಗಳಿವೆ. ಇನ್ನು ನಿನ್ನೆ 42 ಮಂದಿ ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3,842ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ಮಾಹಿತಿ ನೀಡಿದೆ.