ಸಂಗ್ರಹ ಚಿತ್ರ 
ದೇಶ

24 ಗಂಟೆಗಳಲ್ಲಿ ದೇಶಾದ್ಯಂತ 2,15,195 ಕೋವಿಡ್ ಪರೀಕ್ಷೆ, ಜೂನ್ 23ರವರೆಗೆ ಒಟ್ಟಾರೆ 73,52,911 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,15,195 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,15,195 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,15,195 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜೂನ್ 23ರವರೆಗೂ 73,52,911 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಸ್ಫೋಟ, ಒಂದೇ ದಿನ ಗರಿಷ್ಠ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 15,968 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 456183ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 465 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 14476ಕ್ಕೆ ತಲುಪಿದೆ. 456183 ಮಂದಿ ಸೋಂಕಿತರ ಪೈಕಿ 2,58,685 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 183022 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಭಾರತದಲ್ಲಿ 1 ಲಕ್ಷ ಜನಸಂಖ್ಯೆಗೆ 1 ಕೊರೋನಾ ಸಾವು ಸಂಭವಿಸುತ್ತಿದೆ. ಜಾಗತಿಕ 6.04ರ ಸಾವಿನ ಸರಾಸರಿಗೆ ಹೋಲಿಸಿದರೆ ಭಾರತದಲ್ಲಿ ಮರಣ ಪ್ರಮಾಣ ಅತ್ಯಂತ ಕಡಿಮೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ