ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾರಾಷ್ಟ್ರವನ್ನೇ ಮೀರಿಸಿದ ದೆಹಲಿ; 24 ಗಂಟೆಗಳಲ್ಲಿ 3947 ಹೊಸ ಸೋಂಕು ಪ್ರಕರಣಗಳು ದಾಖಲು

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ಪವನ್ನೇ ದೆಹಲಿ ಮೀರಿಸಿ ನಿಂತಿದೆ.

ಕೊರೊನಾ ಸೋಂಕು
Srinivasa Murthy VN
Updated On : 24 Jun 2020, 11:52 am

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ಪವನ್ನೇ ದೆಹಲಿ ಮೀರಿಸಿ ನಿಂತಿದೆ.

ಹೌದು.. ಒಂದು ದಿನದ ಗರಿಷ್ಠ ಸೋಂಕಿತರ ಸಂಖ್ಯೆಯಲ್ಲಿ ಇದೀಗ ದೆಹಲಿ ಮಹಾರಾಷ್ಟ್ರವನ್ನೂ ಮೀರಿ ನಿಂತಿದ್ದು, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 3947 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 66602ಕ್ಕೆ ಏರಿಕೆಯಾಗಿದೆ.

ಇನ್ನು ಈ ಪೈಕಿ 41,614‬ ಮಂದಿ ಸೋಂಕಿತರು ಗುಣಮುಖರಾಗಿದ್ದು, 24988 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಒಂದೇ ದಿನ ದೆಹಲಿಯಲ್ಲಿ 68 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2301ಕ್ಕೆ ಏರಿಕೆಯಾಗಿದೆ. 

Advertisement

Advertisement

ಕೊರೋನಾ ವೈರಸ್ ಸಾವು ಮತ್ತು ಸೋಂಕಿತರ ಸಂಖ್ಯೆ ಕಡಿಮೆ ಮಾಡಲು ದೆಹಲಿ ಸರ್ಕಾರ ಹರಸಾಹಸ ಪಡುತ್ತಿದ್ದರೂ ಈ ಸಂಖ್ಯೆಗಳು ಕಡಿಮೆಯಾಗುತ್ತಲೇ ಇಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement