ದೇಶ

ಪಾಕ್ ಗೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ!

Srinivas Rao BV

ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದನ್ನು ತಡೆಗಟ್ಟಲು ಇರುವ ಜಾಗತಿಕ ಕಣ್ಗಾವಲು ಸಂಸ್ಥೆ (ಎಫ್ ಎಟಿಎಫ್) ನಿಂದ ಮತ್ತೆ ಪಾಕಿಸ್ತಾನಕ್ಕೆ ಮುಖಭಂಗ ಉಂಟಾಗಿದೆ.

ಎಫ್ಎಟಿಎಎಫ್ ಪಾಕಿಸ್ತಾನವನ್ನು ಮತ್ತೆ ಗ್ರೇ ಪಟ್ಟಿಯಲ್ಲೇ ಮುಂದುವರೆಸಲು ತೀರ್ಮಾನಿಸಿರುವುದು ಪಾಕಿಸ್ತಾನದ ಮಟ್ಟಿಗೆ ಜಾಗತಿಕ ಮಟ್ಟದಲ್ಲಿ ತೀವ್ರ ಹಿನ್ನೆಡೆಯಾಗಿ ಪರಿಣಮಿಸಿದೆ. ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಜೈಶ್-ಎ-ಮೊಹಮ್ಮದ್ (ಜೆಇಎಂ) ಸೇರಿದಂತೆ ಹಲವು ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ಸಿಗುವುದನ್ನು ಪಾಕಿಸ್ತಾನ ಸಮರ್ಥವಾಗಿ ತಡೆಗಟ್ಟಿಲ್ಲದ ಕಾರಣ ಪಾಕಿಸ್ತಾನವನ್ನು ಗ್ರೇ ಪಟ್ಟಿಯಲ್ಲೇ ಉಳಿಸಲಾಗುತ್ತಿದೆ ಎಂದು ಎಫ್ಟಿಎಎಫ್ ತಿಳಿಸಿದೆ.

ಜೂ.25 ರಂದು ನಡೆದ ಸಭೆಯಲ್ಲಿ ಈ ಎಫ್ಎಟಿಎಫ್ ಈ ನಿರ್ಧಾರ ಪ್ರಕಟಿಸಿದ್ದು, ಅಕ್ಟೋಬರ್ ನಲ್ಲಿ ನಡೆಯಲಿರುವ ಮುಂದಿನ ಸಭೆಯವರೆಗೂ ಈ ಆದೇಶ ಅನ್ವಯವಾಗಲಿದೆ. ಪಾಕಿಸ್ತಾನ ಭಯೋತ್ಪಾದಕರ ಪಾಲಿಗೆ ಸ್ವರ್ಗವಾಗಿದೆ ಎಂಬ ಅಮೆರಿಕ ಹೇಳಿಕೆಯ ಬೆನ್ನಲ್ಲೇ ಎಫ್ಎಟಿಎಫ್ ಈ ಆದೇಶ ಹೊರಡಿಸಿದೆ.

SCROLL FOR NEXT