ಸಾಂದರ್ಭಿಕ ಚಿತ್ರ 
ದೇಶ

ಬಾಕಿ ಉಳಿದಿದ್ದ ಸಿಬಿಎಸ್ ಇ, ಐಸಿಎಸ್ ಇ 10, 12ನೇ ತರಗತಿ ಪರೀಕ್ಷೆ ರದ್ದು

ಬಾಕಿ ಉಳಿದರುವ ಸಿಬಿಎಸ್ ಇ ಮತ್ತು ಐಸಿಎಸ್ ಇ 10ನೇ ಹಾಗೂ 12ನೇ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಮುಂಬೈ: ಬಾಕಿ ಉಳಿದರುವ ಸಿಬಿಎಸ್ ಇ ಮತ್ತು ಐಸಿಎಸ್ ಇ 10ನೇ ಹಾಗೂ 12ನೇ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಜುಲೈ 1ರಿಂದ 15ರ ವರೆಗೆ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್‌ಇ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಕೆಲ ಪೋಷಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಆಂತರಿಕ ಮೌಲ್ಯಮಾಪನ ಮತ್ತು ಪ್ರಾಯೋಗಿಕ ಪರೀಕ್ಷೆಗಳ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಬೇಕೆಂದೂ ಈ ಅರ್ಜಿದಾರರು ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಕುರಿತು ನಿಮ್ಮ ನಿರ್ಧಾರ ತಿಳಿಸುವಂತೆ ಸಿಬಿಎಸ್ ಇ ಮತ್ತು ಐಸಿಎಸ್ ಇಗೆ ಸೂಚನೆ ನೀಡಿತ್ತು.

ಇಂದು ಕೇಂದ್ರ ಸರ್ಕಾರದ ಪರ ಸುಪ್ರೀಂ ಕೋರ್ಟ್ ಮಾಹಿತಿ ನೀಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೊವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಮಹಾರಾಷ್ಚ್ರ ಮತ್ತು ತಮಿಳುನಾಡು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿವೆ. ಹೀಗಾಗಿ ಸಿಬಿಎಸ್ ಇ ಜುಲೈ 1ರಿಂದ 15ರ ವರೆಗೆ ನಿಗದಿಯಾಗಿದ್ದ 12ನೇ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

12ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಮೂರು ಶಾಲಾ ಪರೀಕ್ಷೆಗಳ ಫಲಿತಾಂಶದ ಆಧಾರದ ಮೇಲೆ ವಾರ್ಷಿದ ಪರೀಕ್ಷೆಯ ಫಲಿತಾಂಶ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಸುಧಾರಣೆ ಮಾಡಿಕೊಳ್ಳಲು ನಂತರ ಪರೀಕ್ಷೆ ಬರೆಯಬಹುದು. ಪರಿಸ್ಥಿತಿಗಳು ಅನುಕೂಲಕರವಾದ ನಂತರ, ಪರೀಕ್ಷೆ ಆಯ್ಕೆ ಮಾಡುವ ವಿದ್ಯಾರ್ಥಿಗಳಿಗೆ ನಾವು ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆಗಳನ್ನು ನಡೆಸಬಹುದು ಎಂದು ಮೆಹ್ತಾ ತಿಳಿಸಿದ್ದಾರೆ.

ಇದೇ ವೇಳೆ ಐಸಿಎಸ್ ಇ ಸಹ 10 ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದೆ ಎಂದು ಮೆಹ್ತಾ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!