ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್ ಗರಿಷ್ಠ ದಾಖಲೆ: 24 ಗಂಟೆಗಳಲ್ಲಿ ದೇಶಾದ್ಯಂತ 15,968 ಹೊಸ ಪ್ರಕರಣ ಪತ್ತೆ

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 15,968 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 15,968 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ದೇಶದ ವಿವಿಧ ರಾಜ್ಯಗಳಲ್ಲಿ ಮಾರಕ ಕೊರೋನಾ ವೈರಸ್ ಸಾವಿರಾರು ಮಂದಿಗೆ ಒಕ್ಕರಿಸಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 15,968 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4.56 ಲಕ್ಷಕ್ಕೇರಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಭಾರತದಲ್ಲಿ ಜೂನ್‌ 24ರ ರಾತ್ರಿ 8ರ ವೇಳೆಗೆ 4,56,183 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಲ್ಲಿ 1,83,022 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ಒಂದೇ ದಿನ  10,495 ಮಂದಿ ಸೋಂಕಿತರು ಚೇತರಿಕೆ ಕಂಡಿದ್ದಾರೆ.  ಆ ಮೂಲಕ ದೇಶಾದ್ಯಂತ 2,58,685 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.  ಇನ್ನು ದೇಶದಲ್ಲಿ ಕೊರೋನಾ ಸೋಂಕಿತರ ಚೇತರಿಕೆ ಪ್ರಮಾಣ ಕೂಡ ಚೇತೋಹಾರಿಯಾಗಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ 56.71ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 465 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 14,476ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ