ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಸೊಪೋರ್ ನಲ್ಲಿ ಎನ್ಕೌಂಟರ್, ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 

ಬಾರಾಮುಲ್ಲಾದ ಸೊಪೋನಾ ನಲ್ಲಿರುವ ಹರ್ದ್'ಶಿವ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದು ಬರುತ್ತಿದ್ದಂತೆಯೇ ಸಿಆರ್'ಪಿಎಫ್ ಹಾಗೂ ಪೊಲೀಸರು, ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. 

ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಪರಿವರ್ತಿಸಿದ ಭದ್ರತಾಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

'ಮಲ್ಲಿಕಾರ್ಜುನ ಖರ್ಗೆಯಿಂದ ಸದಾ ಒತ್ತಡಕ್ಕೆ ಒಳಗಾಗಿರುತ್ತೇನೆ': ರಾಜ್ಯಸಭೆ ಸಭಾಪತಿ ಸಿಪಿ ರಾಧಾಕೃಷ್ಣನ್

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಜಾರ್ಖಂಡ್‌ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!