ನವದೆಹಲಿ: ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹಾಗೂ ಅವರ ಪತ್ನಿಗೆ ಕೋವಿಡ್-19 ಸೋಂಕು ತಗುಲಿದೆ. ಕೋವಿಡ್-19 ಸೋಂಕು ದೃಢವಾಗುತ್ತಿದ್ದಂತೆಯೇ ಕಾಂಗ್ರೆಸ್ ನ ವಕ್ತಾರರೂ ಆಗಿರುವ ಅಭಿಷೇಕ್ ಮನು ಸಿಂಘ್ವಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಅಭಿಷೇಕ್ ಮನು ಸಿಂಘ್ವಿಗೆ ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿದ್ದು, ಸೋಂಕಿಗೆ ಗುರಿಯಾಗಿರುವ ಅವರ ಪತ್ನಿ ಸರ್ಕಾರಿ ನಿರ್ದೇಶನಗಳ ಪ್ರಕಾರ ಐಸೊಲೇಷನ್ ನಲ್ಲಿದ್ದಾರೆ. ಸಿಂಘ್ವಿ ಹಾಗೂ ಪತ್ನಿಗೆ ಕೊರೋನಾ ಸೋಂಕು ದೃಢವಾಗುತ್ತಿದ್ದಂತೆಯೇ ಅವರ ಕುಟುಂಬ ಸದಸ್ಯರನ್ನೂ ಸಹ ಪರೀಕ್ಷೆಗೊಳಪಡಿಸಲಾಗಿದೆ.
ಕಾಂಗ್ರೆಸ್ ವಕ್ತಾರ ಸಂಜಯ್ ಝಾ ನಂತರ ಕೊರೋನಾ ಸೋಂಕಿಗೆ ಗುರಿಯಾಗಿರುವ ಎರಡನೇ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಆಗಿದ್ದಾರೆ.