ದೇಶ

ಆರ್ ಜಿಎಫ್ ಹಗರಣವನ್ನು ಮೊದಲು 2015 ರಲ್ಲಿ ಪ್ರಸ್ತಾಪಿಸಿದ್ದೇ ನಾನು; ಸರ್ಕಾರ ಈಗ ಕ್ರಮ ಕೈಗೊಳ್ಳಲಿ: ಸುಬ್ರಮಣಿಯನ್ ಸ್ವಾಮಿ 

Srinivas Rao BV

ನವದೆಹಲಿ: ಯುಪಿಎ ಅವಧಿಯಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯ (ಪಿಎಂಎನ್ಆರ್ ಎಫ್) ರಾಜೀವ್ ಗಾಂಧಿ ಫೌಂಡೇಷನ್ ಗೆ ಹಣ ವರ್ಗಾವಣೆ ಮಾಡುತ್ತಿತ್ತು ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆರೋಪದ ಬೆನ್ನಲ್ಲೇ ಸುಬ್ರಮಣಿಯನ್ ಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ.

ಟ್ವಿಟರ್ ನಲ್ಲಿ ಬರೆದಿರುವ ಸುಬ್ರಮಣಿಯನ್ ಸ್ವಾಮಿ, ರಾಜೀವ್ ಗಾಂಧಿ ಫೌಂಡೇಷನ್ (ಆರ್ ಜಿಎಫ್) ಹಗರಣದ ಬಗ್ಗೆ ಮೊಟ್ಟ ಮೊದಲ ಬಾರಿಗೆ 2015 ರಲ್ಲಿ ನಾನೇ ಪ್ರಸ್ತಾಪಿಸಿದ್ದೆ. ಸರ್ಕಾರ ಈಗ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ. 

"2015 ರಲ್ಲಿ ನಗರಾಭಿವೃದ್ಧಿ ಸಚಿವಾಲಯದೊಂದಿಗೆ ಈ ವಿಷಯನ್ನು ಪ್ರಸ್ತಾಪಿಸಿ, ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ನಿರ್ಮಾಣ ಮಾಡಲು 1988 ರಲ್ಲಿ ಜಾಗ ನೀಡಲಾಗಿತ್ತು. ಇದನ್ನು ಖಾಸಗಿ ಉದ್ದೇಶಕ್ಕೆ ಬಳಕೆ ಮಾಡುವಂತಿರಲಿಲ್ಲ, ಈಗ ಆ ಕಟ್ಟಡಕ್ಕೆ ನೀಡಲಾಗಿದ್ದ ಜಾಗವನ್ನು ರದ್ದುಗೊಳಿಸಿ, ಕಟ್ಟಡವನ್ನು ವಶಕ್ಕೆ ತೆಗೆದುಕೊಳ್ಳಿ ಎಂದು 2015 ರಲ್ಲೇ ಮನವಿ ಮಾಡಿದ್ದೆ. ನನ್ನ ಮನವಿಯನ್ನು ಪರಿಗಣಿಸಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. 

ಇದಕ್ಕೂ ಮುನ್ನ ಅಂಕಿ-ಅಂಶಗಳೊಂದಿಗೆ ಟ್ವೀಟ್ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಯುಪಿಎ ಅವಧಿಯಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯ (ಪಿಎಂಎನ್ಆರ್ ಎಫ್) ಯಿಂದ ರಾಜೀವ್ ಗಾಂಧಿ ಫೌಂಡೇಷನ್ ಗೆ ಹಣ ವರ್ಗಾವಣೆ ಮಾಡುತ್ತಿತ್ತು ಎಂಬ ಮಾಹಿತಿ ಹಂಚಿಕೊಂಡು, ದೇಶದ ಜನ ಕಷ್ಟಪಟ್ಟು ಪಿಎಂಎನ್ಆರ್ ಎಫ್ ಗೆ ಹಣ ನೀಡಿದರೆ ಅದನ್ನು ಬೇರೆ ಉದ್ದೇಶಗಳಿಗಾಗಿ ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂದು ಆರೋಪಿಸಿದ್ದರು.

SCROLL FOR NEXT