ಸಾಂದರ್ಭಿಕ ಚಿತ್ರ 
ದೇಶ

ಸಿಬಿಎಸ್ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಇನ್ನು ಪರೀಕ್ಷೆಯಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯ ಹತ್ತನೇ ತರಗತಿ ಪರೀಕ್ಷೆಯ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟನೆ ನೀಡಿದೆ.

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯ ಹತ್ತನೇ ತರಗತಿ ಪರೀಕ್ಷೆಯ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟನೆ ನೀಡಿದೆ.

ಹತ್ತು ಮತ್ತು ಹನ್ನೆರಡೇ ತರಗತಿಯ ಇನ್ನುಳಿದ ಪರೀಕ್ಷೆಗಳನ್ನು ರದ್ದುಗೊಳಿಸಿದ ಬಳಿಕ ನಿನ್ನೆ ಮಾಧ್ಯಮಗಳಲ್ಲಿ 10ನೇ ತರಗತಿ ಪರೀಕ್ಷೆ ಬಗ್ಗೆ ತಪ್ಪು ವರದಿ ಪ್ರಕಟವಾಗಿದೆ. ಈಗಾಗಲೇ ಮುಗಿದಿರುವ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕ ಮತ್ತು ಇಂಟರ್ನಲ್ ಅಸ್ಸೆಸ್ಸ್ ಮೆಂಟ್ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಲೆಕ್ಕಹಾಕಲಾಗುತ್ತದೆ. ಆದರೆ ಪರೀಕ್ಷೆಗಳನ್ನು ತೆಗೆದುಕೊಂಡಿದ್ದರೆ ಉತ್ತಮ ರೀತಿಯಲ್ಲಿ ಬರೆಯಬಹುದಿತ್ತು ಎಂದು ಭಾವಿಸುವ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ತೆಗೆದುಕೊಳ್ಳಬಹುದು ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ತಪ್ಪಾಗಿದೆ ಎಂದು ಸಚಿವಾಲಯ ಹೇಳಿದೆ.

ಇನ್ನು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದಿಲ್ಲ. ಮೌಲ್ಯಮಾಪನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಫಲಿತಾಂಶ ಪ್ರಕಟಿಸಲಾಗುತ್ತದೆ ಮತ್ತು ಅದುವೇ ಅಂತಿಮ ಎಂದು ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ