ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19 ತಡೆಯುವ ಯಾವುದೇ ಯೋಜನೆ ಇಲ್ಲ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ
Nagaraja AB
Updated On : 27 Jun 2020, 12:01 pm

ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ 5 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಯಾವುದೇ ಯೋಜನೆ ಕೇಂದ್ರ ಸರ್ಕಾರಕ್ಕೆ ಇಲ್ಲ,  ಪ್ರಧಾನಿ ನರೇಂದ್ರ ಮೋದಿ ಕೊರೋನಾ ವಿರುದ್ಧ ಹೋರಾಟವನ್ನು ನಿರಾಕರಿಸಿ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶದ ಹೊಸ ಭಾಗಗಳಿಗೂ ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ಯೋಜನೆ ಕೇಂದ್ರಸರ್ಕಾರಕ್ಕೆ ಇಲ್ಲ.ಪ್ರಧಾನಿ ಮೋದಿ ಮೌನವಾಗಿದ್ದಾರೆ.ಅದರ ವಿರುದ್ಧ ಹೋರಾಟವನ್ನು ನಿರಾಕರಿಸಿ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement