ಶಂಕರ್ ಸಿಂಗ್ ವಾಘೇಲಾ 
ದೇಶ

ಗುಜರಾತ್ ಮಾಜಿ ಸಿಎಂ ಶಂಕರ್ ಸಿಂಗ್ ವಘೇಲಾ ಗೆ ಕೊರೋನಾ ಸೋಂಕು

ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ.

ಗಾಂಧಿನಗರ: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ತಿಳಿದುಬಂದಿದೆ.

ಶಂಕರ್ ಸಿಂಗ್ ವಘೇಲಾ ಅವರಿಗೆ ತೀವ್ರ ಜ್ವರ ಕಂಡುಬಂದು ಹಿನ್ನಲೆಯಲ್ಲಿ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿತ್ತು. 

ಇದೀಗ ಅದರ ವರದಿ ಬಂದಿದ್ದು, ಶಂಕರ್ ಸಿಂಗ್ ವಘೇಲಾ ಅವರಿಗೆ ಕೋವಿಡ್ -19 ಸೋಂಕು ದೃಢವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರು, ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದ್ದಾರೆ.

79 ವರ್ಷದ ಶಂಕರ್ ಸಿಂಗ್ ವಘೇಲಾ ಅವರು, ಬಿಜೆಪಿ ಪಕ್ಷದಿಂದ ರಾಜಕೀಯ ಪ್ರಾರಂಭಿಸಿದ್ದರು. 1996ರ ಅಕ್ಟೋಬರ್ ನಿಂದ 1997ರ ಅಕ್ಟೋಬರ್ ವರೆಗೆ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಜನತಾ ಪಕ್ಷ, ಕಾಂಗ್ರೆಸ್ ಸೇರಿದ ಅವರು ಸದ್ಯ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT