ರಮೇಶ್ ನಿಶಾಂಕ್ ಪೋಖ್ರಿಯಾಲ್ 
ದೇಶ

ದೇಶದ 100 ಪ್ರಮುಖ ವಿ.ವಿಗಳಲ್ಲಿ ಪೂರ್ಣ ಪ್ರಮಾಣದ ಆನ್ ಲೈನ್ ಶಿಕ್ಷಣ: ರಮೇಶ್ ಪೊಕ್ರಿಯಾಲ್ ನಿಶಾಂಕ್

ದೇಶದ 100 ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಪೂರ್ಣ ಪ್ರಮಾಣದ ಆನ್ ಲೈನ್ ಶಿಕ್ಷಣ ಭೋಧಿಸುವು ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಕ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

ನವದೆಹಲಿ: ದೇಶದ 100 ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಪೂರ್ಣ ಪ್ರಮಾಣದ ಆನ್ ಲೈನ್ ಶಿಕ್ಷಣ ಭೋಧಿಸುವು ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಕ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

ಕೋವಿಡ್ 19 ಸಂಕಷ್ಟ ಸಂದರ್ಭದಲ್ಲಿ ಡಿಜಿಟಲ್ ಕಲಿಕೆಗೆ ಉತ್ತೇಜನ ನೀಡುತ್ತಿದ್ದು, ಶೀಘ್ರದಲ್ಲೇ ದೇಶದ ಪ್ರಮುಖ 100 ವಿಶ್ವವಿದ್ಯಾಲಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್ ಶಿಕ್ಷಣ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಕ್ರಿಯಾಲ್ ತಿಳಿಸಿದ್ದಾರೆ

ಕೋವಿಡ್-19 ಸಂಕಷ್ಟ ಸಂದರ್ಭದಲ್ಲಿ ಶಿಕ್ಷಣದ ಸ್ಥಿತಿಗತಿ ಕುರಿತು ಜಿ-೨೦ ಸದಸ್ಯ ರಾಷ್ಟ್ರಗಳ ಶಿಕ್ಷಣ ಸಚಿವರೊಂದಿಗೆ ಶನಿವಾರ ಆನ್‌ಲೈನ್ ಸಮಾವೇಶದಲ್ಲಿ ಮಾತನಾಡಿದ ಅವರು, ಬದಲಾದ ಸನ್ನಿವೇಶದಲ್ಲಿ ಆನ್ ಲೈನ್ ಶಿಕ್ಷಣಕ್ಕೆ ಪ್ರಧಾನ ಆದ್ಯತೆ ನೀಡುವ ಅಗತ್ಯವಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ. 

ಜಿ -20  ಶಿಕ್ಷಣ ಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ಮಾತಾನಾಡಿದ ನಿಶಾಂಕ್, ಕೊರೋನಾ ಸಾಂಕ್ರಾಮಿಕದಿಂದಾಗಿ ಶಿಕ್ಷಣ ವಲಯವೂ ಸೇರಿದಂತೆ ದೇಶದ ಎಲ್ಲ ವರ್ಗಗಳೂ ತೊಂದರೆಗೀಡಾಗಿದೆ. 

ದೇಶದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಪುನರುಜ್ಜೀವನಕ್ಕಾಗಿ ಗಣನೀಯ ಪ್ರಮಾಣದ ಹಣಕಾಸಿನ ಹಂಚಿಕೆಗೆ ದೇಶದ ಜಿಡಿಪಿಯ ಶೇಕಡಾ 10 ರಷ್ಟು ಆರ್ಥಿಕ ಪ್ಯಾಕೇಜ್ ಅನ್ನು ಸರ್ಕಾರ ಮೀಸಲಿಟ್ಟಿದೆ. ಈ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡಿದ್ದು. ದೇಶದ 100 ಪ್ರಮುಖ ಪ್ರತಿಷ್ಛಿತ ವಿಶ್ವ ವಿದ್ಯಾಲಯಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಡಿಜಿಟಲ್ ಶಿಕ್ಷಣ ಆರಂಭಿಸಲಾಗುತ್ತದೆ. ಇದಕ್ಕಾಗಿ ಆನ್ ಲೈನ್ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT