ಇಮ್ರಾನ್ ಖಾನ್-ಮೋದಿ 
ದೇಶ

ಕೊರೋನಾ ಮಧ್ಯೆ ಕರ್ತಾರ್ಪುರ ಕಾರಿಡಾರ್ ತೆರೆಯಲು ಸಿದ್ದ ಎಂದ ಪಾಕಿಸ್ತಾನಕ್ಕೆ ಭಾರತ ತಿರುಗೇಟು!

ಜೂ.29ರಿಂದ ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತಾರ್ಪುರ ಕಾರಿಡಾರ್'ನ್ನು ತೆರೆಯಲು ಸಿದ್ಧತೆಗಳನ್ನು ನಡೆಸುತ್ತಿರುವುದಾಗಿ ಪಾಕಿಸ್ತಾನ ಹೇಳಿದ್ದು ಇದಕ್ಕೆ ಭಾರತ ತಿರುಗೇಟು ನೀಡಿದೆ.

ನವದೆಹಲಿ/ಇಸ್ಲಾಮಾಬಾದ್: ಜೂ.29ರಿಂದ ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ತಾರ್ಪುರ ಕಾರಿಡಾರ್'ನ್ನು ತೆರೆಯಲು ಸಿದ್ಧತೆಗಳನ್ನು ನಡೆಸುತ್ತಿರುವುದಾಗಿ ಪಾಕಿಸ್ತಾನ ಹೇಳಿದ್ದು ಇದಕ್ಕೆ ಭಾರತ ತಿರುಗೇಟು ನೀಡಿದೆ.

ಪಾಕಿಸ್ತಾನ ವಿದೇಶಾಂಗ ಸಚಿವ ಶಾ.ಮಹಮ್ಮೂದ್ ಖುರೇಷಿಯವರು ಟ್ವೀಟ್ ಮಾಡಿದ್ದು ಕರ್ತಾಪುರ ಕಾರಿಡಾರ್ ತೆರೆಯುವ ಬಗ್ಗೆ ತಿಳಿಸಿದ್ದಾರೆ.

ವಿಶ್ವದಾದ್ಯಂತ ಧಾರ್ಮಿಕ ಕೇಂದ್ರಗಳು ಪುರರಾರಂಭಗೊಳ್ಳುತ್ತಿದ್ದಂತೆ, ಕರ್ತಾರ್ಪುರ ಕಾರಿಡಾರ್'ನ್ನು ತೆರೆಯಲು ಪಾಕಿಸ್ದಾನ ಸಿದ್ಥತೆ ನಡೆಸುತ್ತಿದೆ. ಮಹಾರಾಜ ರಂಜೀತ್ ಸಿಂಗ್ ಅವರ ಮರಣ ವರ್ಷಾಚರಣೆಯ ಅಂಗವಾಗಿ ಜೂ.29,2020ರಂದು ಎಲ್ಲಾ ಸಿಖ್ ಯಾತ್ರಾರ್ಥಿಗಳಿಗೆ ಕರ್ತಾರ್ಪುರ ಸಾಹಿಬ್ ಕಾರಿಡಾರ್'ನ್ನು ಮತ್ತೆ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಭಾರತಕ್ಕೆ ಮಾಹಿತಿ ನೀಡಲಾಗಿದೆ ಎಂದು ಹೇಳಿಕೊಂಡಿದ್ದರು.

ಇದಕ್ಕೆ ಭಾರತ ಪಾಕಿಸ್ತಾನ ಇದೀಗ ತಾನು ಸೌಹಾರ್ಧ ಸಂಬಂಧ ಹರಿಕಾರ ಎಂದು ಬಿಂಬಿಸಿಕೊಳ್ಳುವ ನಾಟಕವಾಡುತ್ತಿದೆ. ಸೋಮವಾರದಿಂದ ಕಾರಿಡಾರ್ ಆರಂಭವಾಗುವುದಿದ್ದರೆ ಈ ಮೊದಲೇ ವಿಷಯವನ್ನು ತಿಳಿಸಬೇಕಿತ್ತು ಎಂದು ತಿರುಗೇಟು ನೀಡಿದೆ. 

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ತಾರ್ಪುರ ಕಾರಿಡಾರ್'ನ್ನು ಮಾರ್ಚ್16 ರಿಂದ ಭಾರತ ಬಂದ್ ಮಾಡಿತ್ತು. ಇದರಂತೆ ಪಾಕಿಸ್ತಾನ ಕೂಡ ತನ್ನ ಪ್ರಜೆಗಳು ಈ ಮಾರ್ಗದಲ್ಲಿ ಸಂಚರಿಸುವುದಕ್ಕೆ ನಿಷೇಧ ಹೇರಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್