ಕೇರಳ ಆರೋಗ್ಯ ಸಚಿವೆ ಶೈಲಜಾ 
ದೇಶ

ಕೇರಳಕ್ಕೆ ಮತ್ತೆ ಕೊರೋನಾಘಾತ; ಒಂದೇ ದಿನ 118 ಸೋಂಕು ಪ್ರಕರಣ ದಾಖಲು

ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 118 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಕೊಚ್ಚಿನ್: ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 118 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರು ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ ಕೇರಳದಲ್ಲಿ 118 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ. ಕಳೆದ 10 ದಿನಗಳಿಂದ ಕೇರಳದಲ್ಲಿ ಸತತ 100ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. 

ಕೇರಳದಲ್ಲಿ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಶೂನ್ಯವಾದ ಬಳಿಕ ಮತ್ತೆ ಕೊರೋನಾ ವೈರಸ್ ಈ ರಾಜ್ಯದಲ್ಲಿ ತನ್ನ 2ನೇ ಇನ್ನಿಂಗ್ಸ್ ಆರಂಭಿಸಿದೆ. ನಿನ್ನೆ ಕೇರಳದಲ್ಲಿ 118 ಸೋಂಕು ಪ್ರಕರಣ ದಾಖಲಾಗಿದ್ದು, ಆ ಮೂಲಕ ಕೇರಳದಲ್ಲಿ ಸತತ 10ನೇ ದಿನ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಅಂತೆಯೇ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4165ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2015 ಸಕ್ರಿಯ ಪ್ರಕರಣಗಳಿವೆ. ಅಂತೆಯೇ 2150 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ: ಅಮೆರಿಕಾಕ್ಕೆ Iran ಖಡಕ್ ಸಂದೇಶ..!

ದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ರಸ್ತೆ ಸಾರ್ವಜನಿಕ ಆಸ್ತಿ, ಕಾರು ಮಾಲೀಕರ ಸ್ವತ್ತಲ್ಲ: ಸಂಚಾರ ದಟ್ಟಣೆ ಕಡಿಮೆಯಾಗಬೇಕಾದರೆ ಪಾರ್ಕಿಂಗ್ ನಿಯಂತ್ರಣ ಅಗತ್ಯ; ಸಚಿವ ಕೃಷ್ಣ ಬೈರೇಗೌಡ (INTERVIEW)

Bigg Boss Kannada 13 ಆರಂಭ; ಎಲ್ಲಾ 16 ಸ್ಪರ್ಧಿಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ!

KPSC ಹಗರಣ: ಶಾಂತಾ ಹೊಸಮನಿಗಾಗಿ ಸಿಐಡಿ ಶೋಧ; ಬಂಧನ ವಾರಂಟ್‌ಗೆ ಕೋರ್ಟ್ ಗೆ ಮನವಿ ಸಾಧ್ಯತೆ!