ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಖುಲ್ಚೊಹರ್ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.
ಅನಂತ್ ನಾಗ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಖುಲ್ಚೊಹರ್ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.
ಅವರ ಗುರುತುಗಳನ್ನು ಪತ್ತೆಹಚ್ಚಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಮೊನ್ನೆ 26ರಂದು ಟ್ರಾಲ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸಹ ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ನಿನ್ನೆ ಸಾಯಂಕಾಲ ಅನಂತ್ ನಾಗ್ ಜಿಲ್ಲೆಯ ಚೆವಾ ಉಲ್ಲಾರ್ ಗ್ರಾಮದಲ್ಲಿ ಉಗ್ರರ ಇರುವಿಕೆ ಬಗ್ಗೆ ಜಮ್ಮು-ಕಾಶ್ಮೀರ ಪೊಲೀಸರಿಂದ ಮಾಹಿತಿ ಪಡೆದ ಭದ್ರತಾ ಪಡೆ ಪೊಲೀಸರು ಶೋಧ ಕಾರ್ಯ ನಡೆಸುವಾಗ ಉಗ್ರರ ಇರುವಿಕೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿತು. ನಂತರ ಎನ್ ಕೌಂಟರ್ ನಡೆಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.