ದೇಶ

ಲಡಾಖ್, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ: ಫೇಕ್ ಟ್ವೀಟ್ ಎಂದ ಕೇಂದ್ರ ಗೃಹ ಸಚಿವಾಲಯ

Manjula VN

ನವದೆಹಲಿ: ಲಡಾಖ್ ಗಡಿಯಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ಏರ್ಪಟ್ಟ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗುತ್ತಿದ್ದು, ಈ ಹಿಂದೆ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂಬ ಗೃಹ ಸಚಿವ ಅಮಿತ್ ಶಾ ಮಾಡಿದ್ದಾರೆನ್ನಲಾದ ಟ್ವೀಟ್ ನಕಲಿ ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಸ್ಪಷ್ಟಪಡಿಸಿದೆ. 

ಈ ಹಿಂದೆ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಟ್ವಿಟರ್ ಖಾತೆಯಂತೆಯೇ ಕಾಣುವ ಟ್ವೀಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 

ಈ ಟ್ವೀಟ್ ನಲ್ಲಿ ಲಡಾಖ್ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗಿತ್ತು. ಖುದ್ದು ಗೃಹ ಸಚಿವರೇ ಟ್ವೀಟ್ ಮಾಡಿದ ರೀತಿಯಲ್ಲಿ ಮಾಹಿತಿ ನೀಡಲಾಗಿತ್ತು. 

ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಗೃಹ ಸಚಿವಾಲಯ, ಇದೊಂದು ಸುಳ್ಳು ಸುದ್ದಿ. ಗೃಹ ಸಚಿವ ಅಮಿತ್ ಶಾ ಅವರು ಇಂತಹ ಯಾವುದೇ ಟ್ವೀಟ್ ಮಾಡಿಲ್ಲ ಎಂದು ಗೃಹ ಖಾತೆ ಸಚಿವಾಲಯದ ವಕ್ತಾರರು ಸ್ಪಷ್ಟಪಡಿಸಿದ್ದಾರೆ. 

ಪ್ರಸ್ತುತ ಬೆಳವಣಿಗಗಳನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಯಾವುದೇ ರೀತಿಯ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿಲ್ಲ. ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

SCROLL FOR NEXT