ಕೆಪಿ ಅನ್ಬಗಳನ್ 
ದೇಶ

ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆಪಿ ಅನ್ಬಳಗನ್ ಗೆ ಕೊರೋನಾ ಪಾಸಿಟಿವ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಉನ್ನತ ಶಿಕ್ಷಣ ಸಚಿವ ಕೆ ಪಿ ಅನ್ಬಳಗನ್ ಅವರಿಗೆ ಪಾಸಿಟಿವ್ ದೃಢಪಟ್ಟಿದೆ.

ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಉನ್ನತ ಶಿಕ್ಷಣ ಸಚಿವ ಕೆ ಪಿ ಅನ್ಬಳಗನ್ ಅವರಿಗೆ ಪಾಸಿಟಿವ್ ದೃಢಪಟ್ಟಿದೆ.

ಆರಂಭದಲ್ಲಿ ಅನ್ಬಳಗನ್ ಅವರಿಗೆ ಯಾವುದೇ ಕೊರೋನಾ ಲಕ್ಷಣ ಕಾಣಿಸಿಕೊಂಡಿರಲಿಲ್ಲ. ಆದರೆ ನಂತರ ಸ್ವಲ್ಪ ಕೆಮ್ಮು ಕಾಣಿಸಿಕೊಂಡ ನಂತರ ಅವರನ್ನು ಎರಡನೇ ಬಾರಿ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಸಚಿವರ ವರದಿ ಪಾಸಿಟಿವ್ ಬಂದಿದೆ ಎಂದು ಎಐಒಟಿ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ ಸಚಿವರ ಆರೋಗ್ಯ ಸ್ಥಿರವಾಗಿದ್ದು, ಸಿಟಿ ಸ್ಕ್ಯಾನ್ ಸೇರಿದಂತೆ ಅವರ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲ ವರದಿಗಳು ನಾರ್ಮಲ್ ಇದೆ ಎಂದು ಆಸ್ಪತ್ರೆ ತಿಳಿಸಿದೆ.

ಅನ್ಬಳಗನ್ ಅವರು ಸಹ ಕೊವಿಡ್-19 ನಿಯಂತ್ರಣ ತಂಡದ ಭಾಗವಾಗಿದ್ದು, ಅವರು ಜೂನ್ 10 ರಂದು ರಿಪನ್ ಕಟ್ಟಡದಲ್ಲಿ ನಡೆದ ಕೊವಿಡ್-19 ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?