ದೇಶ

ಬಿಹಾರ ಚುನಾವಣೆ: ಐದು ವರ್ಷಗಳ ಸಾಧನೆ ಬಿಚ್ಚಿಟ್ಟ ನಿತೀಶ್ ಕುಮಾರ್

Lingaraj Badiger

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಲೇ ಸಿದ್ಧತೆ ಆರಂಭಿಸಿದ್ದು, ಭಾನುವಾರ ತಮ್ಮ ನೇತೃತ್ವದ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಐದು ವರ್ಷಗಳ ಸಾಧನೆಯನ್ನು ಬಿಚ್ಚಿಟ್ಟಿದ್ದಾರೆ.

ಇಂದು ಪಾಟ್ನಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್ ಅವರು, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳ ತಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ವರದಿ ನೀಡಿದರು. 

ಇದೇ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಬಿಹಾರ ಸಿಎಂ, ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ನಮ್ಮ ಸರ್ಕಾರ 6.6 ಲಕ್ಷ ಸಾರ್ವಜನಿಕ ದೂರುಗಳನ್ನು ವಿಲೇವಾರಿ ಮಾಡಿದೆ ಎಂದರು.

ರಾಷ್ಟ್ರೀಯ ಅಪರಾಧ ಸೂಚ್ಯಂಕದಲ್ಲಿ ಬಿಹಾರ 23ನೇ ಸ್ಥಾನದಲ್ಲಿದೆ ಮತ್ತು ಅತ್ಯಾಚಾರ ಪ್ರಕರಣಗಳ ಸೂಚ್ಯಂಕದಲ್ಲಿ 33ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ನಿತೀಶ್ ಕುಮಾರ್ ಅವರು ಹೇಳಿದರು.

ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ ಅವರು, ಯಾದವ್ ಅವರು ಮಾಧ್ಯಮಗಳ ವರದಿ ನೋಡಿ ಆರೋಪ ಮಾಡುವುದನ್ನು ಬಿಡಬೇಕು. ಸರಿಯಾಗಿ ಮಾಹಿತಿ ಪಡೆದು ಮಾತನಾಡಬೇಕು ಎಂದರು.

SCROLL FOR NEXT