ದೇಶ

ದೆಹಲಿ ಹಿಂಸಾಚಾರಕ್ಕೆ ಕೇಂದ್ರವೇ ನೂರಕ್ಕೆ ನೂರು ಹೊಣೆ: ಶರದ್ ಪವಾರ್

Lingaraj Badiger

ಮುಂಬೈ: 42ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ದೆಹಲಿ ಕೋಮುಗಲಭೆಗೆ ಕೇಂದ್ರ ಸರ್ಕಾರವೇ ನೂರಕ್ಕೆ ನೂರರಷ್ಟು ಹೊಣೆಗಾರ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಆರೋಪಿಸಿದ್ದಾರೆ.

ಇಂದು ಎನ್ ಸಿಪಿ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಶರದ್ ಪವಾರ್ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ನಂತರ ಒಡೆದು ಆಳುವ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಂವಿಧಾನದ ಪ್ರಕಾರ, ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಕೇಂದ್ರದ ಜವಾಬ್ದಾರಿ, ದೆಹಲಿ ಜನಪ್ರತಿನಿಧಿಗಳು ಮತ್ತು ಸರ್ಕಾರದ ವ್ಯಾಪ್ತಿಗೆ ಪೊಲೀಸರು ಬರುವುದಿಲ್ಲ. ಹೀಗಾಗಿ ದೆಹಲಿ ಹಿಂಸಾಚಾರಕ್ಕೆ ನೂರಕ್ಕೆ ನೂರು ಕೇಂದ್ರವೇ ಹೊಣೆ ಪವಾರ್ ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿ ಹೊತ್ತಿ ಉರಿಯುತ್ತಿದೆ. ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದೆ. ಈಗ ಬಿಜೆಪಿ ಕೋಮುವಾದವನ್ನು ಪ್ರಚೋದಿಸುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.

SCROLL FOR NEXT