’ಸಾಮಾಜಿಕ ಜಲಾತಾಣ, ನಾಯಕರ ದ್ವೇಷ ಭಾಷಣ, ಪಾಕ್, ಬಾಂಗ್ಲಾ ನುಸುಳುಕೋರರಿಂದ ದೆಹಲಿಯಲ್ಲಿ ಕೋಮುಗಲಭೆ’ 
ದೇಶ

’ಸಾಮಾಜಿಕ ಜಲಾತಾಣ, ನಾಯಕರ ದ್ವೇಷ ಭಾಷಣ, ಪಾಕ್, ಬಾಂಗ್ಲಾ ನುಸುಳುಕೋರರಿಂದ ದೆಹಲಿಯಲ್ಲಿ ಕೋಮುಗಲಭೆ’

ಸಾಮಾಜಿಕ ಜಾಲತಾಣದಲ್ಲಿನ ಸುಳ್ಳು  ಪ್ರಚಾರ ದೆಹಲಿಯಲ್ಲಿ ಕೋಮುಗಲಭೆ ಸಂಭವಿಸಲು ಕಾರಣ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. 

ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿನ ಸುಳ್ಳು  ಪ್ರಚಾರ ದೆಹಲಿಯಲ್ಲಿ ಕೋಮುಗಲಭೆ ಸಂಭವಿಸಲು ಕಾರಣ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. 

ಹೈದಾರಾಬಾದ್ ನಲ್ಲಿ ನಡೆದ ಐಎಸ್ ಬಿ ಪಾಲಿಸಿ ಕಾನ್ಕ್ಲೇವ್ ನ್ನು ಉದ್ಘಾಟಿಸಿ ಮಾತನಾಡಿರುವ ಕಿಶನ್ ರೆಡ್ಡಿ, ಸಾಮಾಜಿಕ ಜಾಲತಾಣದಲ್ಲಿನ ಸುಳ್ಳು ಪ್ರಚಾರದಷ್ಟೇ ಅಲ್ಲದೇ ರಾಜಕಾರಣಿಗಳ ದ್ವೇಷ ಭಾಷಣವೂ ಗಲಭೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ. 

ದೆಹಲಿ ಗಲಭೆಯಲ್ಲಿ ಪೊಲೀಸ್ ಅಧಿಕಾರಿಗಳ ಭೀಕರ ಹತ್ಯೆ ದುಃಖಕರ ಎಂದು ಹೇಳಿರುವ ಅವರು, ಪಾಕಿಸ್ತಾನ, ಬಾಂಗ್ಲಾದೇಶದ ನುಸುಳುಕೋರರು ಭಾರತದಲ್ಲಿ ವಿನಾಶ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ಇಡೀ ವಿಶ್ವ ಭಾರತದತ್ತ ನೋಡುತ್ತಿದೆ, ಕೈಗಾರಿಕೆ ಮತ್ತು ತಾಂತ್ರಿಕ ವಿಷಯದಲ್ಲಿ ಅಭಿವೃದ್ಧಿಯಾಗುತ್ತಿದ್ದು, ಯುವಜನತೆ ಹೊಸ ಆಲೋಚನೆಗಳೊಂದಿಗೆ ಬನ್ನಿ ಎಂದು ಕಿಶನ್ ರೆಡ್ಡಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT