ಸಂಗ್ರಹ ಚಿತ್ರ 
ದೇಶ

12 ವರ್ಷದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಮರಕ್ಕೆ ನೇಣು ಹಾಕಿದ ಅಪ್ರಾಪ್ತರು

ಅಸ್ಸಾಂನಲ್ಲಿ 12 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಯುವಕರು ಪೈಶಾಚಿಕವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಅತ್ಯಾಚಾರದ ಬಳಿಕ ಸಂತ್ರಸ್ಥ ಬಾಲಕಿಯನ್ನು ಮರಕ್ಕೆ ನೇಣು ಹಾಕಿ ಕೊಂದು ಹಾಕಿದ್ದಾರೆ.

ಗುವಾಹಟಿ: ಅಸ್ಸಾಂನಲ್ಲಿ 12 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಯುವಕರು ಪೈಶಾಚಿಕವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಅತ್ಯಾಚಾರದ ಬಳಿಕ ಸಂತ್ರಸ್ಥ ಬಾಲಕಿಯನ್ನು ಮರಕ್ಕೆ ನೇಣು ಹಾಕಿ ಕೊಂದು ಹಾಕಿದ್ದಾರೆ.

ಅಸ್ಸಾಂನ ಬಿಸ್ವನಾಥ್ ಜಿಲ್ಲೆಯ ಗೋಹಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಕ್ಲಾ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದ್ದು, ಅತ್ಯಾಚಾರ ಎಸಗಿದ ನಂತರ ಬಾಲಕಿಯನ್ನು ಮರಕ್ಕೆ ನೇಣು ಹಾಕಲಾಗಿದೆ.  ಮೂಲಗಳ ಪ್ರಕಾರ ಸಾಮೂಹಿಕ ಅತ್ಯಾಚಾರ ಗೈದ ಆರೋಪಕ್ಕೆ ಸಂಬಂಧಿಸಿದಂತೆ 10ನೇ ತರಗತಿ ಪರೀಕ್ಷೆ ಮುಗಿಸಿದ್ದ 7 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪರೀಕ್ಷೆ ನಂತರ ಪಾರ್ಟಿ ಆಯೋಜಿಸುವ ನೆಪದಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಮನೆಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಶುಕ್ರವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನಂತರ ಮನೆಯ ಸಮೀಪದ ಕಾಡಿನಲ್ಲಿದ್ದ ಮರಕ್ಕೆ ನೇಣುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇನ್ನು ಬಾಲಕಿ ನಾಪತ್ತೆಯಾದ ಕುರಿತು ಬಾಲಕಿ ಪೋಷಕರು ಶೋಧ ನಡೆಸುತ್ತಿದ್ದಾಗ ಶನಿವಾರ ಬೆಳಗ್ಗೆ ಕಾಡಿನಲ್ಲಿ ಬಾಲಕಿಯ ಶನ ಪತ್ತೆಯಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT