ದೇಶ

ದೆಹಲಿ ಹಿಂಸಾಚಾರ: ಸಂಸತ್ ದ್ವಾರದ ಬಳಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

Manjula VN

ನವದೆಹಲಿ: ಪೌರತ್ವ ತಿದ್ದುಪಡಿ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಖಂಡಿಸಿ ಕಾಂಗ್ರೆಸ್ ಸಂಸದರು ಸಂಸತ್ತಿನ ದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ದೆಹಲಿ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಉಭಯ ಸದನಗಳಲ್ಲಿ ಕಾಂಗ್ರೆಸ್ ನಾಯಕರು ಮನವಿ ಮಾಡಿಕೊಂಡಿದ್ದು, ಚರ್ಚೆಗೆ ಅವಕಾಸ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಲೋಕಸಬೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಅಮಿತ್ ಶಾ ರಾಜೀನಾಮೆ ನೀಡಬೇಕು. ಭಾರತವನ್ನು ರಕ್ಷಣೆ ಮಾಡಬೇಕು. ಪ್ರಧಾನಮಂತ್ರಿಗಳೇ ನಮ್ಮ ಪ್ರಶ್ನಗೆ ಉತ್ತರ ನೀಡಿ ಎಂದು ಘೋಷಣೆ ಕೂಗುತ್ತಿದ್ದಾರೆ. 

ಪ್ರತಿಭಟನೆ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ದೆಹಲಿ ಹಿಂಸಾಚಾರ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಹಲವು ಬಾರಿ ಮನವಿ ಮಾಡಿಕೊಂಡಿದ್ದೇವೆ. ದೆಹಲಿ ಹಿಂಸಾಚಾರ ಕುರಿತು ನಮಗೆ ಚರ್ಚೆಗೆ ಅವಕಾಶ ನೀಡಬೇಕೆಂಬುದು ನಮ್ಮ ಮೊದಲ ಆಗ್ರಹವಾಗಿದೆ. ಹಿಂಸಾಚಾರದ ಜವಾಬ್ದಾರಿಯನ್ನು ಯಾರಾದರೂ ತೆಗೆದುಕೊಳ್ಳಬೇಕು. ಇದು ನಮ್ಮ ಎರಡನೇ ಆಗ್ರಹವಾಗಿದೆ . ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ನಾವು ಆಗ್ರಹಿಸುತ್ತೇನೆ. ಅಲ್ಲದೆ, ಪ್ರಧಾನಮಂತ್ರಿಗಳು ನಮಗೆ ಉತ್ತರ ನೀಡಬೇಕು ಎಂದು ಹೇಳಿದ್ದಾರೆ. 

SCROLL FOR NEXT