ಕೇಜ್ರಿವಾಲ್, ಅಂಕಿತ್ ಶರ್ಮಾ 
ದೇಶ

ದೆಹಲಿ ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ಐಬಿ ಆಫೀಸರ್ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ- ಕೇಜ್ರಿವಾಲ್

ಈಶಾನ್ಯ ದೆಹಲಿ ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಕುಟುಂಬಕ್ಕೆ ಗೌರವಾರ್ಥವಾಗಿ 1 ಕೋಟಿ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪ್ರಕಟಿಸಿದ್ದಾರೆ

ನವದೆಹಲಿ:ಈಶಾನ್ಯ ದೆಹಲಿ ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಕುಟುಂಬಕ್ಕೆ ಗೌರವಾರ್ಥವಾಗಿ 1 ಕೋಟಿ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪ್ರಕಟಿಸಿದ್ದಾರೆ. ಅಂಕಿತ್ ಶರ್ಮಾ ಅವರ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸವನ್ನು ನೀಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ದಕ್ಷ ಅಧಿಕಾರಿಯಾಗಿದ್ದ ಅಂಕಿತ್ ಶರ್ಮಾ ಅವರನ್ನು ಹಿಂಸಾಚಾರದಲ್ಲಿ ಬರ್ಬರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ. ಅವರ ಬಗ್ಗೆ ದೇಶಕ್ಕೆ ಹೆಮ್ಮೆಯಿದೆ. ಅವರ ಕುಟುಂಬಕ್ಕೆ 1 ಕೋಟಿ ನೆರವು ಹಾಗೂ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದು, ಅವರ ಆತ್ಮಕ್ಕೆ ಶಾಂತಿ ಕೋರುವುದಾಗಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ ಚಾಂದ್ ಬಾಗ್ ಪ್ರದೇಶದಲ್ಲಿ ಚರಂಡಿಯೊಂದರಲ್ಲಿ ಶರ್ಮಾ ಅವರ ಮೃತದೇಹ ಪತ್ತೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?