ದೇಶ

ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಪವನ್ ಗುಪ್ತಾ

Srinivasamurthy VN

ನವದೆಹಲಿ: ನಿರ್ಭಯಾ ಹತ್ಯಾಚಾರಿಗಳ ಗಲ್ಲುಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಪರಾಧಿಗಳು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದು, ಇದೀಗ ಪ್ರಕರಣದ ಮತ್ತೋರ್ವ ಅಪರಾಧಿ ಪವನ್ ಗುಪ್ತಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತಂತೆ ಅಪರಾಧಿ ಪವನ್ ಗುಪ್ತಾ ಪರ ವಕೀಲ ಎಪಿ ಸಿಂಗ್ ಅವರು ಇಂದು ದೆಹಲಿಯ ಪಾಟಿಯಾಲಾ ಕೋರ್ಟ್ ಗೆ ಮಾಹಿತಿ ನೀಡಿದ್ದು, ತಮ್ಮ ಕಕ್ಷೀದಾರ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಈ ಅರ್ಜಿಯ ಇತ್ಯರ್ಥವಾಗುವವರೆಗೂ ಗಲ್ಲು ಶಿಕ್ಷೆಜಾರಿ ಮುಂದೂಡುವಂತೆ ಮನವಿ ಮಾಡಿದ್ದರು. ಆದರೆ ಪವನ್ ಗುಪ್ತಾ ಸಲ್ಲಿಸಿದ್ದ ಈ ಕ್ಯುರೇಟಿವ್ ಅರ್ಜಿಯನ್ನು ಸೆಷನ್ಸ್ ಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾದ ಧರ್ಮೇಂದ್ರ ರಾಣಾ ಅವರು ವಜಾಗೊಳಿಸಿದ್ದಾರೆ. ಈ ಹಿಂದೆ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿತ್ತು.

ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತ!
ಇನ್ನು 2012ರಲ್ಲಿ ಈ ಪ್ರಕರಣ ನಡೆದಾಗ ಪವನ್ ಗುಪ್ತಾ ಅಪ್ರಾಪ್ತನಾಗಿದ್ದ. ಈ ಅಂಶವನ್ನು ಪರಿಗಣಿಸದೇ ಕೋರ್ಟ್ ಗಲ್ಲು ಶಿಕ್ಷೆ ಜಾರಿ ಮಾಡಿತ್ತು. ಹೀಗಾಗಿ ಇದೀಗ ಈ ಎಲ್ಲ ಅಂಶಗಳನ್ನು ಸೇರಿಸಿ ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ವಕೀಲ ಎಪಿ ಸಿಂಗ್ ಹೇಳಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಹಿಂದೆ ಫೆ. 5ಕ್ಕೆ ಅಕ್ಷಯ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಿದ್ದರು. 

SCROLL FOR NEXT