ದೇಶ

ದೆಹಲಿ: ಸಂಸತ್ ವರೆಗಿನ ಸಿಎಎ ವಿರೋಧಿ ಜಾಥಾಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು

Nagaraja AB

ನವದೆಹಲಿ: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಮಲೀಲಾ ಮೈದಾನದಿಂದ ಸಂಸತ್ ವರೆಗೆ ವಿದ್ಯಾರ್ಥಿಗಳು ಜಾಥಾ ನಡೆಸಲು ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದಾರೆ.

ವಿವಿಧ ವಿದ್ಯಾರ್ಥಿಗಳ ಸಂಘಟನೆಯೊಂದಿಗೆ ಮಂಗಳವಾರ ಜಾಥಾ ನಡೆಸಲು ದಿ ಯಂಗ್ ಇಂಡಿಯಾ ಸಮನ್ವಯ ಸಮಿತಿ ಕರೆ ನೀಡಿದೆ. ಜಾಥಾಕ್ಕಾಗಿ ಅನುಮತಿ ಕೇಳಲಾಗಿದೆ ಆದರೆ, ಅನುಮತಿ ನೀಡಿಲ್ಲ ಎಂದು ಪೊಲೀಸರು ಸ್ಪಷ್ಪಪಡಿಸಿದ್ದಾರೆ.

ಜಾಥಾಕ್ಕಾಗಿ ಅನುಮತಿ ಕೋರಿ ಫೆಬ್ರವರಿ 27 ರಂದೇ ಮನವಿ ಸಲ್ಲಿಸಲಾಗಿತ್ತು. ಆದರೆ, ಇಂದು ಅನುಮತಿ ನಿರಾಕರಿಸಿರುವ ಮಾಹಿತಿ ನೀಡಲಾಗಿದೆ. ಕೊನೆ ಕ್ಷಣದಲ್ಲಿ ಈ ರೀತಿ ಹೇಳಲಾಗಿದೆ ಎಂದು ಜೆಎನ್ ಯು ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ ಎನ್ ಸಾಯಿ ಬಾಲಾಜಿ ತಿಳಿಸಿದ್ದಾರೆ. 

ಅನೇಕ ವಿದ್ಯಾರ್ಥಿಗಳು ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೀವೆ. ರಾಮ ಲೀಲಾ ಮೈದಾನದಲ್ಲಿ ಎಲ್ಲರೂ ಸೇರಲಿದ್ದು, ಏನು ಮಾಡಬೇಕು ಎಂಬುದನ್ನು ಯೋಚಿಸಲಾಗುವುದು ಎಂದು ಅವರು ಹೇಳಿದ್ದಾರೆ

ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಕೋಮು ಗಲಭೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸೂಕ್ಷ್ಮ ಪರಿಸ್ಥಿತಿ ಮನಗಂಡು ಅನುಮತಿಯನ್ನು ನಿರಾಕರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SCROLL FOR NEXT