ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಮೂರು ಕೊರೋನಾ ಪ್ರಕರಣ ಪತ್ತೆ, ವೈರಸ್​ ಸೋಂಕಿತ ಟೆಕ್ಕಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ!

ದೇಶದಲ್ಲಿ ಮತ್ತೆ ಮೂರು ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮಾರಣಾಂತಿಕ ವೈರಸ್ ಸೋಂಕಿತ ತೆಲಂಗಾಣ ಮೂಲದ ಟೆಕ್ಕಿ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ನವದೆಹಲಿ: ದೇಶದಲ್ಲಿ ಮತ್ತೆ ಮೂರು ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮಾರಣಾಂತಿಕ ವೈರಸ್ ಸೋಂಕಿತ ತೆಲಂಗಾಣ ಮೂಲದ ಟೆಕ್ಕಿ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಎರಡು ವಾರಗಳ ಬಳಿಕ ಈ ಸೋಂಕು ತಗುಲಿದೆ ಎನ್ನಲಾಗಿದ್ದ ಕೇರಳದ ಮೂವರು ರೋಗಿಗಳು ಚೇತರಿಸಿಕೊಂಡಿದ್ದು, ಈಗ ಮತ್ತೆ ಮೂರು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ದೆಹಲಿಯಲ್ಲಿ ಒಂದು, ತೆಲಂಗಾಣದಲ್ಲಿ ಒಂದು ಹಾಗೂ ರಾಜಸ್ಥಾನದಲ್ಲಿ ಇಟಲಿಯ ಪ್ರವಾಸಿಗನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕು ದೃಢಪಟ್ಟಿರುವ ವ್ಯಕ್ತಿ ಇಟಲಿಯಿಂದ ವಾಪಸಾಗಿದ್ದರೆ. ಮತ್ತೋರ್ವ ವ್ಯಕ್ತಿ ತೆಲಂಗಾಣದವರಾಗಿದ್ದು, ಇತ್ತೀಚೆಗೆ ದುಬೈನಿಂದ ಬೆಂಗಳೂರಿಗೆ ಹಿಂದಿರುಗಿದ್ದರು.

“ಸೋಂಕಿತರಿಬ್ಬರ ದೇಹಸ್ಥಿತಿ ಸ್ಥಿರವಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.

ಇನ್ನು ತೆಲಂಗಾಣದಲ್ಲಿ ಪತ್ತೆಯಾದ ಮಾರಕ ವೈರಸ್​ ಪೀಡಿತ ಟೆಕ್ಕಿ ಬೆಂಗಳೂರಿನಿಂದ ಬಸ್​ ಮುಖಾಂತರ ಹೈದರಾಬಾದ್​ಗೆ ತೆರಳಿದ್ದರು. ಹೀಗೆ ಬಸ್​ನಲ್ಲಿ ತೆರಳಿದ್ದಾಗ ಹಲವರ ಜತೆ ಟೆಕ್ಕಿ ಸಂಭಾಷಣೆ ಮಾಡಿದ್ದು, ಈಗ ಬಸ್​ನಲ್ಲಿದ್ದ ಆ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗುತ್ತಿದೆ.

ವೈರಸ್​ ದೃಢಪಟ್ಟಿರುವ ತೆಲಂಗಾಣ ವ್ಯಕ್ತಿ 24 ವರ್ಷದ ಟೆಕ್ಕಿಯಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಈತನನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದ್ದು, ಆತನ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಟೆಕ್ಕಿ ಬೆಂಗಳೂರಿನಿಂದ ಹೈದರಾಬಾದ್ ಗೆ ಬಸ್ ನಲ್ಲಿ ಪ್ರಯಾಣಿಸಿದ್ದರಿಂದ 80 ಮಂದಿಯನ್ನು ತಪಾಸಣೆಗೆ ಒಳಪಡಿಸುತ್ತಿರುವುದಾಗಿ ತೆಲಂಗಾಣ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!