ದೇಶ

ದೆಹಲಿ ಗಲಭೆಯಲ್ಲಿ 79 ಮನೆ, 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ: ಡಿಸಿಎಂ ಸಿಸೋಡಿಯಾ

Lingaraj Badiger

ನವದೆಹಲಿ: ಇತ್ತೀಚಿಗೆ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಒಟ್ಟು 79 ಮನೆಗಳು ಹಾಗೂ 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಸೋಡಿಯಾ, ಪೊಲೀಸ ಪ್ರಕಾರ, ಇದುವರೆಗೆ ಒಟ್ಟು 41 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಒಟ್ಟು 79 ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇದರ ಹೊರತಾಗಿಯೂ 168 ಮನೆಗಳಿಗೆ ಗಂಭೀರ ಹಾನಿ ಹಾಗೂ 40 ಮನೆಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ ಎಂದು ಸಿಸೋಡಿಯಾ ತಿಳಿಸಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಸಚಿವರು ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 18 ತಂಡಗಳಿಂದ ಗಲಭೆಯ ಹಾನಿಯನ್ನು ಮೌಲ್ಯಮಾಪನ ಮಾಡಲಾಗಿದೆ. ಈಗಾಗಲೇ 25 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗದೆ ಎಂದರು.

SCROLL FOR NEXT