ಪ್ರಧಾನಿ ಮೋದಿ ಭೇಟಿಯಾದ ಸಿಎಂ ಕೇಜ್ರಿವಾಲ್ 
ದೇಶ

ಪ್ರಧಾನಿ ಭೇಟಿಯಾದ ಕೇಜ್ರಿವಾಲ್: ದೆಹಲಿ ಹಿಂಸಾಚಾರ, ಕೊರೋನಾ ವೈರಸ್‌ ಬಗ್ಗೆ ಚರ್ಚೆ

ದೆಹಲಿಯಲ್ಲಿ ಸಿಎಂ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ದೆಹಲಿ ಹಿಂಸಾಚಾರ ಮತ್ತು ಕೊರೋನಾ ವೈರಸ್ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ನವದೆಹಲಿ: ದೆಹಲಿಯಲ್ಲಿ ಸಿಎಂ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ದೆಹಲಿ ಹಿಂಸಾಚಾರ ಮತ್ತು ಕೊರೋನಾ ವೈರಸ್ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ  ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 47 ಮಂದಿ ಸಾವನ್ನಪ್ಪಿದ ಇತ್ತೀಚಿನ ಹಿಂಸಾಚಾರದ ಬಳಿಕ ರಾಷ್ಟ್ರ ರಾಜಧಾನಿಯ ಪರಿಸ್ಥಿತಿ ಕುರಿತು ಚರ್ಚಿಸಿದರು. ಅದೇ ರೀತಿ ಮಾರಣಾಂತಿಕ ಕೊರೋನಾವೈರಸ್‌ ಸೋಂಕು ಹರಡದಂತೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಸಂಸತ್ತಿನ ಆವರಣದಲ್ಲಿ ನಡೆದ ಸಭೆಯ ನಂತರ, ಕೇಜ್ರಿವಾಲ್ ಚರ್ಚೆ "ಫಲಪ್ರದ"ವಾಗಿತ್ತು ಎಂದು ತಿಳಿಸಿದರು.  ಹಿಂಸಾಚಾರದ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಅವರಿಗೆ ಕಠಿಣ ಶಿಕ್ಷೆ  ವಿಧಿಸಬೇಕು ಎಂದು ಅವರು ಪ್ರಧಾನಮಂತ್ರಿಯನ್ನು ಕೋರಿರುವುದಾಗಿ ತಿಳಿಸಿದರು.

ಭಾನುವಾರ ಹರಡಿದ್ದ ವದಂತಿಗಳನ್ನು ಉಲ್ಲೇಖಿಸಿದ ಅವರು, ಪರಿಸ್ಥಿತಿಯನ್ನು ಚಾತುರ್ಯದಿಂದ ನಿಭಾಯಿಸುವಲ್ಲಿ ದೆಹಲಿ ಪೊಲೀಸರ ಕ್ರಮವನ್ನು ಶ್ಲಾಘಿಸಿದರು. ಇಲ್ಲಿಯವರೆಗೆ ಅನೇಕ ಶಂಕಿತ ಪ್ರಕರಣಗಳು ವರದಿಯಾಗಿರುವುದರಿಂದ ಮಾರಣಾಂತಿಕ ಕೊರೋನವೈರಸ್ ಹರಡುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಜ್ರಿವಾಲ್ ಇದೇ ವೇಳೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT