ಆಸ್ಪತ್ರೆ ಮುಂಭಾಗ ಪೊಲೀಸರು 
ದೇಶ

ಜೈಪುರದಲ್ಲಿ ಇಟಲಿ ಪ್ರವಾಸಿಗನಿಗೆ ಕೊರೋನಾ ವೈರಸ್ ಪಾಸಿಟಿವ್: ದೇಶದಲ್ಲಿ ಆರು ಪ್ರಕರಣಗಳು ದೃಢ

ಜೈಪುರದಲ್ಲಿರುವ ಇಟಲಿಯ ಪ್ರವಾಸಿಗರೊಬ್ಬರಲ್ಲಿ  ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ 6 ಮಂದಿಯಲ್ಲಿ ಈ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಇಂದು ತಿಳಿಸಿವೆ.

ನವದೆಹಲಿ: ಜೈಪುರದಲ್ಲಿರುವ ಇಟಲಿಯ ಪ್ರವಾಸಿಗರೊಬ್ಬರಲ್ಲಿ  ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ 6 ಮಂದಿಯಲ್ಲಿ ಈ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಇಂದು ತಿಳಿಸಿವೆ.

 ಪ್ರವಾಸಿಗನಿಂದ ಸಂಗ್ರಹಿಸಲಾದ ಮಾದರಿಯನ್ನು ಶನಿವಾರ ಮೊದಲ ಬಾರಿಗೆ ಪರೀಕ್ಷೆ ನಡೆಸಿದಾಗ  ನಗೆಟಿವ್ ಕಂಡುಬಂದಿತ್ತು. ಆದರೆ, ಆತನ ಸ್ಥಿತಿ ಕ್ಷೀಣಿಸಿದ್ದರಿಂದ ಸೋಮವಾರ ಮತ್ತೆ ಎರಡನೇ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಕಂಡುಬಂದಿದೆ. 

ವರದಿಗಳಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆಯಲ್ಲಿರುವ ನ್ಯಾಷಿನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ದೆಹಲಿ ಹಾಗೂ ಹೈದ್ರಾಬಾದ್ ನಲ್ಲಿ ಎರಡು ಹೊಸ ಪ್ರಕರಣಗಳು ಪತ್ತೆಯಾಗಿತ್ತು. ವಿಶ್ವದಾದ್ಯಂತ ಸುಮಾರು 3, 100 ಜನರ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಸೋಂಕು ಹರಡದಂತೆ  ಸರ್ಕಾರ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!