ಪುಲ್ವಾಮಾ ದಾಳಿ 
ದೇಶ

ಪುಲ್ವಾಮಾ ದಾಳಿ: ಬಾಂಬರ್ ಗೆ ಆಶ್ರಯ ನೀಡಿದ್ದ ತಂದೆ, ಮಗಳನ್ನು ಬಂಧಿಸಿದ ಎನ್ ಐಎ

ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್ ನಿಗೆ ಆಶ್ರಯ ನೀಡಿದ್ದ ಒಬ್ಬ ಉಗ್ರನನ್ನು ಬಂಧಿಸಿದ ನಾಲ್ಕು ದಿನದ ನಂತರ ಇದೇ ಪ್ರಕರಣದಲ್ಲಿ ಇನ್ನಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಇಂದು ಬಂಧಿಸಿದೆ.

ಶ್ರೀನಗರ: ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್ ನಿಗೆ ಆಶ್ರಯ ನೀಡಿದ್ದ ಒಬ್ಬ ಉಗ್ರನನ್ನು ಬಂಧಿಸಿದ ನಾಲ್ಕು ದಿನದ ನಂತರ ಇದೇ ಪ್ರಕರಣದಲ್ಲಿ ಇನ್ನಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಇಂದು ಬಂಧಿಸಿದೆ.

ಪುಲ್ವಾಮಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ.ಲೆತ್ ಪೊರಾ ಪ್ರದೇಶದಲ್ಲಿ ವಾಸಿಸುತ್ತಿದ್ದ ತಂದೆ ಹಾಗೂ ಮಗಳನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳದ ಮೂಲಗಳು ತಿಳಿಸಿವೆ.

ಮತ್ತೆ ಇಬ್ಬರು ಆರೋಪಿಗಳ ಬಂಧನದಿಂದಾಗಿ ಈ ಪ್ರಕರಣದಲ್ಲಿ ಈವರೆಗೂ ಮೂವರನ್ನು ಬಂಧಿಸಲಾಗಿದೆ. ಫೆಬ್ರವರಿ 28 ರಂದು ಶಕಿರ್ ಬಷೀರ್ ಮಾಗ್ರೀ ಎಂಬ ಉಗ್ರನನ್ನು  ರಾಷ್ಟ್ರೀಯ ತನಿಖಾ ದಳ ಬಂಧಿಸಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇರುವುದಾಗಿ ಮೂಲಗಳಿಂದ ತಿಳಿದುಬಂದಿದೆ. 

ಜೈಷ್-ಇ- ಮೊಹ್ಮದ್ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರೀಯನಾಗಿದ್ದ ಹಾಜಿಬಲ್ ನಿವಾಸಿ  ಉಗ್ರ ಮಾಗ್ರೀಯನ್ನು 15 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ಜಮ್ಮು- ಕಾಶ್ಮೀರದ ಎನ್ ಐಎ ವಿಶೇಷ ನ್ಯಾಯಾಲಯ ನೀಡಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT