ದೇಶ

ಸಂಸತ್ತಿನಲ್ಲಿ ಮುಂದುವರೆದ ದೆಹಲಿ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

Manjula VN

ನವದೆಹಲಿ: ಸಂಸತ್ತಿನಲ್ಲಿ ನಡೆಯುತ್ತಿರುವ ಬಜಟ್ ಅಧಿವೇಶನದ ವೇಳೆ ದೆಹಲಿ ಹಿಂಸಾಚಾರ ಕುರಿತು ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಲೋಕಸಬೆ ಹಾಗೂ ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಗಂಟೆಗೆ ಮುಂದೂಡಲಾಗಿದೆ. 

ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸಂಸದ ಅಧಿರ್ ರಂಜನ್ ಚೌಧರಿ, ಗೌವರ್ ಗೊಗೋಯ್ ಹಾಗೂ ಮೋನಿಕಾ ಟಾಗೋರ್ ಅವರು ದೆಹಲಿ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಿದರು. 

ಈ ವೇಳೆ ಚರ್ಚೆಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಉಭಯ ಸದನಗಳಲ್ಲಿ ತೀವ್ರ ಗದ್ದಲವುಂಟಾಗ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಲಾಯಿತು. ನಿನ್ನೆ ಕೂಡ ದೆಹಲಿ ಹಿಂಸಾಚಾರ ಘಟನೆ ಸಂಬಂಧ ಉಭಯ ಸದನಗಳಲ್ಲಿ ತೀವ್ರ ಗದ್ದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿತ್ತು. 

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆ ರಕ್ತಪಾತಕ್ಕೆ ಕಾರಣವಾಗಿತ್ತು. ಈ ಹಿಂಸಾಚಾರ ಸುಮಾರು 47 ಮಂದಿಯನ್ನು ಬಲಿಪಡೆದುಕೊಂಡಿತ್ತು. ಅಲ್ಲದೆ, 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 

SCROLL FOR NEXT