ದೇಶ

ಸುಪ್ರೀಂ ಕೋರ್ಟ್ ನಲ್ಲಿ ಯುಎನ್ ಹೆಚ್ ಆರ್ ಸಿ ಸಿಎಎ ಮಧ್ಯಸ್ಥಿಕೆ ಅರ್ಜಿ: ಇದು ಆಂತರಿಕ ವಿಷಯ ಎಂದು ಭಾರತ ತಿರುಗೇಟು

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಭಾರತದ ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಜಿನಿವಾದಲ್ಲಿರುವ ಭಾರತೀಯ ಶಾಶ್ವತ ನಿಯೋಗಕ್ಕೆ ತಿಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ನವದೆಹಲಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಭಾರತದ ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಜಿನಿವಾದಲ್ಲಿರುವ ಭಾರತೀಯ ಶಾಶ್ವತ ನಿಯೋಗಕ್ಕೆ ತಿಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.


ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ಆಂತರಿಕ ವಿಚಾರವಾಗಿದ್ದು ದೇಶದ ಸಂಸತ್ತು ಈ ಬಗ್ಗೆ ಕಾನೂನು ತರುವ ಸ್ವಾಯತ್ತ ಹಕ್ಕನ್ನು ಹೊಂದಿದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕು ಆಯೋಗಕ್ಕೆ ತಿರುಗೇಟು ನೀಡಿದೆ.


ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗದ ಹೈ ಕಮಿಷನರ್ ಕಚೇರಿ, ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಸ್ಥಿಕೆ ವಹಿಸುವ ಕುರಿತು ಅರ್ಜಿ ಸಲ್ಲಿಸಿರುವುದಾಗಿ ಜಿನಿವಾದಲ್ಲಿರುವ ನಮ್ಮ ಶಾಶ್ವತ ನಿಯೋಗಕ್ಕೆ ನಿನ್ನೆ ತಿಳಿಸಿದ್ದಾರೆ. ಭಾರತದ ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಯಾವುದೇ ವಿದೇಶಗಳ ಅಥವಾ ಮೂರನೇ ಸಂಸ್ಥೆ, ವ್ಯಕ್ತಿಗಳ ಮಧ್ಯ ಪ್ರವೇಶದ ಅಗತ್ಯವಿಲ್ಲ ಎಂದು ಭಾರತ ಅಚಲವಾದ ನಂಬಿಕೆ ಹೊಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.


ಸಿಎಎ, ಸಾಂವಿಧಾನಿಕವಾಗಿ ಮಾನ್ಯವಾಗಿದೆ, ಅದು ಸಾಂವಿಧಾನಿಕ ಮೌಲ್ಯಗಳ ಎಲ್ಲಾ ಅವಶ್ಯಕತೆಗಳನ್ನು ಅನುಸರಿಸುತ್ತದೆ ಎಂದು ಭಾರತ ಸ್ಪಷ್ಟವಾದ ನಂಬಿಕೆ ಹೊಂದಿದೆ. ಭಾರತದ ವಿಭಜನೆಯಿಂದ ಆದ ಸಮಸ್ಯೆಯಿಂದ ಮಾನವ ಹಕ್ಕುಗಳ ವಿಷಯಗಳಿಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದರು.


ಭಾರತವು ಕಾನೂನಿನ ಆಡಳಿತವನ್ನು ಒಳಗೊಂಡ ಪ್ರಜಾಪ್ರಭುತ್ವ ರಾಷ್ಟ್ರ, ಇಲ್ಲಿ ಎಲ್ಲರಿಗೂ ಅತ್ಯುತ್ತಮ ಗೌರವ ತೋರಿಸುತ್ತಿದ್ದು ಸ್ವತಂತ್ರ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆಯಿದೆ. ನಮ್ಮ ಅಭಿಪ್ರಾಯ ಮತ್ತು ಕಾನೂನುಬದ್ಧವಾದ ಸ್ಥಾನಮಾನವನ್ನು ಸುಪ್ರೀಂ ಕೋರ್ಟ್ ಸಮರ್ಥಿಸುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT