ಮಹಾ ಸಿಎಂ ಉದ್ಧವ್ ಠಾಕ್ರೆ 
ದೇಶ

ಮುಂಬೈ: ಸಿಎಂ ಉದ್ಧವ್ ಠಾಕ್ರೆ ನಿವಾಸ ಬಳಿ ವಾಂಟೆಡ್ ಕ್ರಿಮಿನಲ್ ಬಂಧನ; ಪಿಸ್ತೂಲ್, ಮದ್ದುಗುಂಡು ವಶ 

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಬಳಿ ವಾಂಟೆಡ್ ಕ್ರಿಮಿನಲ್ ನ್ನು ಬಂಧಿಸಿ ಆತನಿಂದ ದೇಶಿ ನಿರ್ಮಿತ ಪಿಸ್ತೂಲ್, ಏಳು ಜೀವಂತ ಮದ್ದು ಗುಂಡುಗಳನ್ನು, ಸಿಡಿಮದ್ದುಗಳನ್ನು ಪೊಲೀಸರು ಮಂಗಳವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.

ಮುಂಬೈ:ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಬಳಿ ವಾಂಟೆಡ್ ಕ್ರಿಮಿನಲ್ ನ್ನು ಬಂಧಿಸಿ ಆತನಿಂದ ದೇಶಿ ನಿರ್ಮಿತ ಪಿಸ್ತೂಲ್, ಏಳು ಜೀವಂತ ಮದ್ದು ಗುಂಡುಗಳನ್ನು, ಸಿಡಿಮದ್ದುಗಳನ್ನು ಪೊಲೀಸರು ಮಂಗಳವಾರ ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.

ಮುಂಬೈಯ ಬಾಂದ್ರಾ ಪೂರ್ವದಲ್ಲಿರುವ ಉದ್ಧವ್ ಠಾಕ್ರೆ ನಿವಾಸದ ಹೊರಗೆ ಮುಂಬೈ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನನ್ನು ಇರ್ಶಾದ್ ಖಾನ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮುಂಬೈ, ಥಾಣೆ ಮತ್ತು ಗುಜರಾತ್ ಗಳಲ್ಲಿ ಕಳ್ಳತನ, ದರೋಡೆ, ಕೊಲೆ ಪ್ರಕರಣಗಳು ದಾಖಲಾಗಿದೆ.

ಉದ್ಧವ್ ಠಾಕ್ರೆ ಅವರ ನಿವಾಸದ ಸುತ್ತಮುತ್ತ ತನ್ನ ಸಹಚರರ ಜೊತೆ ಸೇರಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಇರ್ಶಾದ್ ನ ಚಲನವಲನ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಂಧಿಸಿದರು. ಆತನ ಬಳಿಯಿಂದ ಒಂದು ದೇಶಿ ನಿರ್ಮಿತ ರಿವಾಲ್ವರ್, ಏಳು ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ