ಸಂಗ್ರಹ ಚಿತ್ರ 
ದೇಶ

ದೇಶದಾದ್ಯಂತ 6 ಮಂದಿಯಲ್ಲಿ ಕೊರೋನಾವೈರಸ್ ಪತ್ತೆ: ಆರೋಗ್ಯ ಸಚಿವಾಲಯ

ದೇಶದಾದ್ಯಂತ ಒಟ್ಟು 6 ಮಂದಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರೀಯ  ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ದೇಶದಾದ್ಯಂತ ಒಟ್ಟು 6 ಮಂದಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರೀಯ  ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 
 
ಇಟಲಿಯಿಂದ ಬಂದಿರುವ ಮೂವರು ನವದೆಹಲಿ, ತೆಲಂಗಾಣ ಹಾಗೂ ರಾಜಸ್ತಾನಕ್ಕೆ ಬಂದಿಳಿದಿದ್ದು, ಈ ಮೂವರಲ್ಲೂ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಹಿಂದೆ ಕೇರಳದ ಮೂವರಲ್ಲಿ ಸೋಂಕು ಪತ್ತೆಯಾಗಿದ್ದು, ಇದೀಗ ಈ ಮೂವರೂ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದೆ. 

ಈ ಆರು ಮಂದಿಯಲ್ಲೂ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಕ್ತದ ಮಾದರಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ. 

ಈ ನಡುವೆ ಸೋಮವಾರ ರಾಜಸ್ಥಾನದ ಜೈಪುರಕ್ಕೆ ಬಂದಿದ್ದ ಇಟಲಿ ಮೂಲದ ಪ್ರವಾಸಿಗನಿಗೆ ಸೋಂಕು ತಗುಲಿರುವುದು  ಖಚಿತಪಟ್ಟಿದೆ. ಇದೀಗ ಅವರ ಪತ್ನಿಗೂ ಸೋಂಕು ತಗುಲಿರುವುದು ಖಚಿತವಾಗಿದೆ. ಇದನ್ನು ಇನ್ನಷ್ಟು ಖಚಿತಪಡಿಸುವ ನಿಟ್ಟಿನಲ್ಲಿ ಅವರ ರಕ್ತದ ಮಾದರಿಯನ್ನು ಪುಣೆಗೆ ಕಳುಹಿಸಿಕೊಡಲಾಗಿದೆ. ಮತ್ತೊಂದೆಡೆ ಇಟಲಿ ಪ್ರವಾಸಿಗರ ಜೊತೆ ಸಂಪರ್ಕದಲ್ಲಿದ್ದ ಇಟಲಿಯ ಇತರೆ 21 ಪ್ರವಾಸಿಗರು, 3 ಭಾರತೀಯ ಪ್ರವಾಸಿಗರನ್ನು ದೆಹಲಿ ಹೊರವಲಯದ ನಿಗಾ ಘಟಕಕ್ಕೆ ಕಳುಹಿಸಿಕೊಡಲಾಗಿದೆ. ಈ ನಡುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ 6 ಮಂದಿಯಲ್ಲಿ ವೈರಸ್ ಪತ್ತೆಯಾಗಿಲ್ಲ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!