ನಿರ್ಭಯಾ ತಾಯಿ 
ದೇಶ

ಮಾರ್ಚ್ 20ಕ್ಕಾಗಿ ಎದುರು ನೋಡುತ್ತಿದ್ದೇನೆ: ನಿರ್ಭಯಾ ತಾಯಿ

ಮಾರ್ಚ್ 20 ನಮ್ಮ ಜೀವನದ ಅತ್ಯಂತ ಮಹತ್ವದ ದಿನವಾಗಲಿದ್ದು, ಅದಕ್ಕಾಗಿ ಎದುರು ನೋಡುತ್ತಿರುವುದಾಗಿ, ದೆಹಲಿ ಕೋರ್ಟ್ ನಿರ್ಭಯಾ ಹಂತಕರಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿದ ಬಳಿಕ ನಿರ್ಭಯಾ ತಾಯಿ ಆಶಾದೇವಿ ಅವರು ಹೇಳಿದ್ದಾರೆ.

ನವದೆಹಲಿ: ಮಾರ್ಚ್ 20 ನಮ್ಮ ಜೀವನದ ಅತ್ಯಂತ ಮಹತ್ವದ ದಿನವಾಗಲಿದ್ದು, ಅದಕ್ಕಾಗಿ ಎದುರು ನೋಡುತ್ತಿರುವುದಾಗಿ, ದೆಹಲಿ ಕೋರ್ಟ್ ನಿರ್ಭಯಾ ಹಂತಕರಿಗೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿದ ಬಳಿಕ ನಿರ್ಭಯಾ ತಾಯಿ ಆಶಾದೇವಿ ಅವರು ಹೇಳಿದ್ದಾರೆ.

ನಾಲ್ಕು ಕಾಮುಕರಿಗೆ ಮಾರ್ಚ್ 20ರಕ್ಕೆ ಹೊಸ ಡೆತ್ ವಾರೆಂಟ್ ಜಾರಿ ಮಾಡಿರುವ ದೆಹಲಿ ಕೋರ್ಟ್ ಕ್ರಮವನ್ನು ಸ್ವಾಗತಿಸಿರುವ ಆಶಾದೇವಿ, ನಾಲ್ವರೂ ಅಪರಾಧಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿರುವ ರಾಷ್ಟ್ರಪತಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಅಪರಾಧಿಗಳನ್ನು ನೇಣಿಗೆ ಹಾಕುವವರೆಗೆ ನಮ್ಮ ಹೋರಾಟ ನಡೆಯಲಿದೆ. ಮಾರ್ಚ್ 20ರಂದು ಅಪರಾಧಿಗಳನ್ನು ನೇಣಿಗೇರಿಸುವ ವಿಶ್ವಾಸವಿದೆ ಎಂದು ಆಶಾದೇವಿ ತಿಳಿಸಿದ್ದಾರೆ.

ತಮಗೆ ಕಾನೂನಿನ ಮೇಲೆ ಸಂಪೂರ್ಣ ಭರವಸೆಯಿದ್ದು, ಈ ಬಾರಿ ಜಾರಿ ಮಾಡಲಾಗಿರುವ ಡೆತ್ ವಾರೆಂಟ್ ಕೊನೆಯದ್ದು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಅಲ್ಲದೇ ಹೊಸ ಡೆತ್ ವಾರೆಂಟ್ ಅನ್ವಯ ಮಾ.20ರಂದು ಗಲ್ಲುಶಿಕ್ಷೆ ಜಾರಿಯಾಗುವುದನ್ನು ತಾವು ಎದುರು ನೋಡುತ್ತಿರುವುದಾಗಿ ಆಶಾದೇವಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ