ದೇಶ

ಕಾಶ್ಮೀರ: ಭಾರತೀಯ ಯೋಧರ ಗುಂಡೇಟಿಗೆ ಇಬ್ಬರು ಭಯೋತ್ಪಾದಕರು ಔಟ್

Vishwanath S

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್‌ನಲ್ಲಿ ಸೋಮವಾರ ನಡೆದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ, ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ರೈಫಲ್ಸ್ (ಆರ್ಆರ್), ಸಿಆರ್ ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ತಂಡ(ಎಸ್‌ಒಜಿ) ಮೇರೆಗೆ, ಶೋಪಿಯಾನ್‌ನಿಂದ ಸುಮಾರು 8 ಕಿ.ಮೀ. ದೂರದಲ್ಲಿನ ರೆಬಾನ್‌ನಲ್ಲಿ ಬೆಳಿಗ್ಗೆ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದವು.

ಭದ್ರತಾ ಪಡೆಗಳು ಹಳ್ಳಿಯ ಒಂದು ನಿರ್ದಿಷ್ಟ ಪ್ರದೇಶದ ಕಡೆಗೆ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಇಬ್ಬರು ಇಲ್ಲವೇ ಮೂವರು ಅಡಗಿರುವ ಶಂಕೆ ಇದೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT