ಸಿಂಧಿಯಾ ಬಿಜೆಪಿ ಸೇರ್ಪಡೆ 
ದೇಶ

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಮಧ್ಯ ಪ್ರದೇಶದಿಂದ ಜ್ಯೋತಿರಾದಿತ್ಯ ಸಿಂಧಿಯಾ ಕಣಕ್ಕೆ

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಕೇಸರಿ ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮಾರ್ಚ್ 26 ರಂದು ನಡೆಯಲಿರುವ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ತೊರೆದು ಕೇಸರಿ ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಮಾರ್ಚ್ 26 ರಂದು ನಡೆಯಲಿರುವ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯಪ್ರದೇಶದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಮಂಗಳವಾರ ಕಾಂಗ್ರೆಸ್ ತೊರೆದಿದ್ದ ಸಿಂಧಿಯಾ ಇಂದು ಕಮಲ ಪಾಳಯಕ್ಕೆ ಸೇರ್ಪಡೆಯಾಗಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಅಸ್ಸಾಂನಿಂದ ಭುವನೇಶ್ವರ್ ಕಲಿಟಾ, ಬಿಹಾರದಿಂದ ವಿವೇಕ್ ಠಾಕೂರ್, ಅಭಯ್ ಭಾರದ್ವಾಜ್ ಮತ್ತು ಗುಜರಾತ್‍ ನಿಂದ  ರಾಮಿಲಾಬೆನ್ ಬಾರಾ ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ.

ಅಲ್ಲದೆ, ಜಾರ್ಖಂಡ್‌ನಿಂದ ದೀಪಕ್ ಪ್ರಕಾಶ್, ಮಣಿಪುರದಿಂದ ಲೀಸೆಬಾ ಮಹಾರಾಜ, ಮಹಾರಾಷ್ಟ್ರದಿಂದ ಉದಯನ್ ರಾಜೇ ಭೋಸ್ಲೆ ಮತ್ತು ರಾಜಸ್ಥಾನದಿಂದ ರಾಜೇಂದ್ರ ಗೆಹ್ಲೋಟ್ ಅವರನ್ನು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪರಸ್ಪರ ನಂಬಿಕೆ, ಗೌರವದ ಆಧಾರದ ಮೇಲೆ ಸಂಬಂಧ ಮುಂದುವರಿಸಲು ಬದ್ಧ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಪ್ರಧಾನಿ ಮೋದಿ

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

US President: ಅನಾರೋಗ್ಯದ ವದಂತಿ, ಕೆಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸದ ಡೊನಾಲ್ಡ್ ಟ್ರಂಪ್!

ವಿಜಯಪುರ: 'ಥೈಲ್ಯಾಂಡ್ ಮಾವಿನ ತಳಿ' ಬೆಳೆದು ವರ್ಷವಿಡೀ ಆದಾಯ ಗಳಿಸುವ ರೈತ ನವೀನ್! ಯಶೋಗಾಥೆ

ಮತದಾರರ ಅಧಿಕಾರ ಯಾತ್ರೆಗೆ ಪ್ರತ್ಯೇಕ ತಂಡವಾಗಿ ತೆರಳಿದ CM-DCM: ಕಾಂಗ್ರೆಸ್ ನಲ್ಲಿ ಬದಲಾದ ಸಮೀಕರಣ; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!

SCROLL FOR NEXT