ಪವನ್ ಗುಪ್ತಾ 
ದೇಶ

ಜೈಲಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ, ನ್ಯಾಯ ಕೊಡಿಸಿ! ನಿರ್ಭಯಾ ಅಪರಾಧಿಯಿಂದ ಪೋಲೀಸರ ವಿರುದ್ಧ ದೂರು

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ತಾವು ಮಾಂಡೋಲಿ ಜೈಲಿನಲ್ಲಿದ್ದ ವೇಳೆ  ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳ ವಿರುದ್ಧ ಎಫ್‌ಐಆರ್ ನೋಂದಣಿ ಕೋರಿ ಬುಧವಾರ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ತಾವು ಮಾಂಡೋಲಿ ಜೈಲಿನಲ್ಲಿದ್ದ ವೇಳೆ  ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳ ವಿರುದ್ಧ ಎಫ್‌ಐಆರ್ ನೋಂದಣಿ ಕೋರಿ ಬುಧವಾರ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಪವನ್ ಗುಪ್ತಾ ದೂರನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ನಿಗದಿಪಡಿಸಿದೆ.

ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಮತ್ತು ಇನ್ನೊಬ್ಬ ಅಪರಿಚಿತ ಪೊಲೀಸ್ ಕಾನ್‌ಸ್ಟೆಬಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರಿನಲ್ಲಿ ಹರ್ಶ್ ವಿಹಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ನಿರ್ದೇಶನ ನೀಡಲಾಗಿದೆ.

ಶೀಘ್ರವೇ ಪವನ್ ಗುಪ್ತಾ ಗಲ್ಲಿಗೇರುವ ಕಾರಣ ಇಬ್ಬರೂ ಪೊಲೀಸರನ್ನು ಗುರುತಿಸಲು ಸಾಕ್ಷಿಯಾಗಿ ಹಾಜರಾಗಲು ಅವಕಾಶ ನೀಡುವುದು ಅಗತ್ಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೂರ್ವ ದೆಹಲಿಯ ಮಾಂಡೋಲಿಕೇಂದ್ರ ಕಾರಾಗೃಹದಲ್ಲಿ ಪವನ್ ಗುಪ್ತಾ  ಮೇಲೆ  ಜುಲೈ 26 ಮತ್ತು 29, 2019ರಂದು ಇಬ್ಬರು ಕಾನ್‌ಸ್ಟೆಬಲ್‌ಗಳು ಕೆಟ್ಟದಾಗಿ ಥಳಿಸಿದ್ದಾರೆ ಎಂದು ಕ್ರಿಮಿನಲ್ ದೂರಿನಲ್ಲಿ ಆರೋಪಿಸಲಾಗಿದೆ.

ತಲೆಗೆ ಪೆಟ್ಟು ಬಿದ್ದಿದ್ದಕ್ಕಾಗಿ ಆತನನ್ನು ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲದೆ 14 ಹೊಲಿಗೆಗಳನ್ನು ಹಾಕಲಾಗಿದೆ. ದೈಹಿಕ ಹಲ್ಲೆಗೆ ಸಂಬಂಧಿಸಿದ ದಂಡ ವಿಧಿ ಅನ್ವಯ ಇಬ್ಬರು ಪೊಲೀಸರ ವಿರುದ್ಧ ಎಫ್‌ಐಆರ್ ನೋಂದಣಿ  ಕೋರಿದ್ದಾಗಿ ಪವನ್ ಗುಪ್ತಾ ಪರ ವಕೀಲರು ಹೇಳಿದ್ದಾರೆ.

ಇದಕ್ಕೂ ಮೊದಲು ಮಾರ್ಚ್ 5 ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದ್ರ ರಾಣಾ ಅವರ ಅಧ್ಯಕ್ಷತೆಯಲ್ಲಿ ದೆಹಲಿಯ ಮತ್ತೊಂದು ನ್ಯಾಯಾಲಯವು ಮಾರ್ಚ್ 20 ರಂದು ಬೆಳಿಗ್ಗೆ 5.30 ಕ್ಕೆ ಪವನ್ ಕುಮಾರ್ ಗುಪ್ತಾ ಸೇರಿದಂತೆ ನಾಲ್ಕು ಮರಣದಂಡನೆ ಶಿಕ್ಷೆಯನ್ನು ಗಲ್ಲಿಗೇರಿಸಲು ಹೊಸ ಡೆತ್ ವಾರಂಟ್ ಹೊರಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel