ತೆಲಂಗಾಣ: ನಿವೃತ್ತ ಪೊಲೀಸ್ ಅಧಿಕಾರಿ ಕೊಂದು, ಸೆಲ್ಫೀ ತೆಗದುಕೊಂಡ ಆರೋಪಿ! 
ದೇಶ

ತೆಲಂಗಾಣ: ನಿವೃತ್ತ ಪೊಲೀಸ್ ಅಧಿಕಾರಿ ಕೊಂದು, ಸೆಲ್ಫೀ ತೆಗದುಕೊಂಡ ಆರೋಪಿ!

ನಿವೃತ್ತ ಪೊಲೀಸ ಅಧಿಕಾರಿಯನ್ನು ಹತ್ಯೆಗೈದು, ಮೃತದೇಹದ ಮುಂದೆ ನಿಂತು ಆರೋಪಿಯೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದಲ್ಲಿ ನಡೆದಿದೆ. 

ಹೈದರಾಬಾದ್: ನಿವೃತ್ತ ಪೊಲೀಸ ಅಧಿಕಾರಿಯನ್ನು ಹತ್ಯೆಗೈದು, ಮೃತದೇಹದ ಮುಂದೆ ನಿಂತು ಆರೋಪಿಯೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದಲ್ಲಿ ನಡೆದಿದೆ. 

ಶಿವರಾಜ್ ಮೃತಪಟ್ಟಿರುವ ನಿವೃದ್ಧ ಸಹಾಯಕ ಎಎಸ್ಐ ಎಂದು ಗುರ್ತಿಸಲಾಗಿದೆ. ಆರೋಪಿಯ ಹೆಸರು ವಿವೇಕ್ ಎಂದು ತಿಳಿದುಬಂದಿದೆ. 

ಮೃತ ಶಿವರಾಜ್ ಹಾಗೂ ಜಯರಾಜ್ ಎಂಬುವವರ ನಡುವೆ ಭೂ ವಿವಾದ ಏರ್ಪಟ್ಟಿತ್ತು. ಇದರಂತೆ ಶುಕ್ರವಾರ ಜಯರಾತ್ ಪುತ್ರರಾದ ವಿವೇಕ್ ಹಾಗೂ ಮನೋಜ್ ಎಂಬುವವರು ಶಿವರಾಜ್ ಮನೆಗೆ ಬಂದು ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ತೀವ್ರ ವಿಕೋಪಕ್ಕೆ ತಿರುಗಿದೆ. ಈ ವೇಳೆ ವಿವೇಕ್ ಎಂಬಾದ ರಾಡ್ ನಿಂದ ಶಿವರಾಜ್ ತಲೆಗೆ ಬಲವಾಗಿ ಹೊಡೆದಿದ್ದಾನೆ. 

ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಶಿವರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಳಿಕ ಆರೋಪಿ ವಿವೇಕ್ ಮೃತದೇಹದ ಮುಂದೆ ನಿಂತು ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾನೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಆರೋಪಿಗಳಾದ ಮನೋಜ್, ವಿವಾಕ್ ಹಾಗೂ ಅವರ ತಾಯಿ ವನಜಾ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ