ಸಂಗ್ರಹ ಚಿತ್ರ 
ದೇಶ

ನೊಯ್ಡಾ ವ್ಯಕ್ತಿಯಲ್ಲಿ ದೃಢಪಟ್ಟ ಕೊರೋನಾ ವೈರಸ್: ಭಾರತದಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆ

ನೊಯ್ಡಾ ಮೂಲಕ ವ್ಯಕ್ತಿಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಹೇಳಲಾಗುತ್ತಿದ್ದು, ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. 

ನವದೆಹಲಿ: ನೊಯ್ಡಾ ಮೂಲಕ ವ್ಯಕ್ತಿಯೊಬ್ಬರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಹೇಳಲಾಗುತ್ತಿದ್ದು, ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. 

ಕೊರೋನಾ ವೈರಸ್ ನಿಂದ ಬಳಲುತ್ತಿರುವ 35 ವರ್ಷದ ವ್ಯಕ್ತಿ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಪ್ರಸ್ತುತ ಸೋಂಕಿಗೊಳಗಾಗಿರುವ ವ್ಯಕ್ತಿ ಪ್ರವಾಸಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಟಲಿಯಿಂದ ಬಂದಿದ್ದ ವ್ಯಕ್ತಿಯೊಬ್ಬರು ಆಗ್ರ ಹಾಗೂ ಜೈಪುರಕ್ಕೆ ಭೇಟಿ ನೀಡಿದ್ದು, ಇವರೊಂದಿಗೆ ಇದ್ದ ಪರಿಣಾಮ ಈ ವ್ಯಕ್ತಿಗೂ ಕೂಡ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. 

ವ್ಯಕ್ತಿಗೆ ಸೋಂಕು ತಗುಲಿರುವುದನ್ನು ದೆಹಲಿಯ ರೋಗ ನಿಯಂತ್ರಣ ರಾಷ್ಟ್ರೀಯ ಕೇಂದ್ರ (ಎನ್'ಸಿಡಿಸಿ) ದೃಢಪಡಿಸಿದೆ. 

ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದೀಗ ಆತನ ಕುಟುಂಬಸ್ಥರನ್ನೂ ಪರೀಕ್ಷೆಗೊಳಪಡಿಸಲಾಗಿದ್ದು, ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT