ಸಂಗ್ರಹ ಚಿತ್ರ 
ದೇಶ

ಮಹಾಮಾರಿ ಕೊರೋನಾಗೆ ದೆಹಲಿಯಲ್ಲಿ ಮಹಿಳೆ ಬಲಿ! ದೇಶದ ಒಟ್ಟು ಸೋಂಕಿತರ ಸಂಖ್ಯೆ  88ಕ್ಕೆ ಏರಿಕೆ

ದೆಹಲಿಯ ಜನಕಪುರಿಯ 69 ವರ್ಷದ ಮಹಿಳೆ ಶುಕ್ರವಾರ ಕೊರೋನಾವೈರಸ್ ನಿಂದ ಸಾವನ್ನಪ್ಪಿದ್ದ ನಂತರ ದೇಶದಲ್ಲಿ ಕೊರೋನಾವೈರಸ್ ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ. ದೆಹಲಿಯ ಆಸ್ಪತ್ರೆಯಲ್ಲಿ ಕೊರೋನಾವೈರಸ್ ಬಾಧಿತ ಮಹಿಳೆ ಮೃತಪಟ್ಟಿದ್ದಾರೆ. ಇದೇ ವೇಳೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 88 ಕ್ಕೆ ಏರಿದೆ. 

ದೆಹಲಿಯ ಜನಕಪುರಿಯ 69 ವರ್ಷದ ಮಹಿಳೆ ಶುಕ್ರವಾರ ಕೊರೋನಾವೈರಸ್ ನಿಂದ ಸಾವನ್ನಪ್ಪಿದ್ದ ನಂತರ ದೇಶದಲ್ಲಿ ಕೊರೋನಾವೈರಸ್ ನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ. ದೆಹಲಿಯ ಆಸ್ಪತ್ರೆಯಲ್ಲಿ ಕೊರೋನಾವೈರಸ್ ಬಾಧಿತ ಮಹಿಳೆ ಮೃತಪಟ್ಟಿದ್ದಾರೆ. ಇದೇ ವೇಳೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 88 ಕ್ಕೆ ಏರಿದೆ. 

ದೇಶಾದ್ಯಂತ ಹರಡುತ್ತಿರುವ ಮಾರಕ ರೋಗದ ತಡೆಗೆ  ರಾಜ್ಯಗಳು ಮತ್ತು ಸುಪ್ರೀಂ ಕೋರ್ಟ್ ಸಹ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಮಾಲ್ ಮತ್ತು ಸಿನೆಮಾ ಹಾಲ್ ಗಳನ್ನು ಮುಚ್ಚುವಂತೆ ಬಿಹಾರ ಮತ್ತು ಕರ್ನಾಟಕ  ಸರ್ಕಾರಗಳು ಆದೇಶಿಸಿದೆ.  ಅಲ್ಲದೆ ದೊಡ್ಡ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದೆ.

ಭಾರತದ ಕ್ರಿಕೆಟ್‌ನ ಸರ್ವೋಚ್ಚ ಸಂಸ್ಥೆಯಾದ ಬಿಸಿಸಿಐ  ಭಾರತ - ದಕ್ಷಿಣ ಆಫ್ರಿಕಾ ಏಕದಿನ ಪಂದ್ಯಗಳನ್ನು ರದ್ದುಗೊಳಿಸಲು ನಿರ್ಧರಿಸಿತು. ಐಪಿಎಲ್ ಕೂಡ ಮುಂದೂಡಲ್ಪಟ್ಟಿತು 

ಇನ್ನು ಕಳೆದ ಮೂರು ದಿನದ ಹಿಂದೆ ಮೃತಪಟ್ಟಿದ್ದ ಕಲಬುರಗಿಯ76  ವರ್ಷದ  ವೃದ್ದ ಕೊರೋನಾ ಸೋಂಕಿನಿಂದಲೇ ಸಾವನ್ನಪ್ಪಿರುವುದಾಗಿ ನಿನ್ನೆ (ಗುರುವಾರ) ರಾಜ್ಯ ಆರೋಗ್ಯ ಇಲಾಖೆ ದೃಢಪಡಿಸಿತ್ತು. ಇದು ದೇಶದ ಮೊದಲ ಕೊರೋನಾವೈರಸ್ ನಿಂದ ಉಂಟಾದ ಸಾವಿನ ಪ್ರಕರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT