ಫಾರೂಕ್ ಅಬ್ದುಲ್ಲಾ 
ದೇಶ

ಗೃಹ ಬಂಧನ ಆದೇಶ ವಾಪಸ್: ಫಾರೂಕ್ ಅಬ್ದುಲ್ಲಾಗೆ ಬಿಡುಗಡೆಯ ಭಾಗ್ಯ

ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶುಕ್ರವಾರ ಹಿಂಪಡೆದಿದೆ. ಬಂಧನ ಹಿಂಪಡೆಯುವ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರಾಡಳಿತ ಪ್ರದೇಶದ ಯೋಜನಾ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಶ್ರೀನಗರ: ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶುಕ್ರವಾರ ಹಿಂಪಡೆದಿದೆ. ಬಂಧನ ಹಿಂಪಡೆಯುವ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರಾಡಳಿತ ಪ್ರದೇಶದ ಯೋಜನಾ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯ್ದೆ 1978ರ ಸೆಕ್ಷನ್ 19(1)ರಡಿ ಲಭ್ಯವಾಗಿರುವ ಅಧಿಕಾರ ಬಳಸಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನ ಆದೇಶವನನ್ನು ರದ್ದುಪಡಿಸಿದೆ. ಈ ಸಂಬಂಧ ಶ್ರೀನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಸುಮಾರು ಏಳು ತಿಂಗಳುಗಳಿಂದ ಪಾರೂಕ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು, ಸರ್ಕಾರದ ಮುಂದಿನ ಆದೇಶದಂತೆ ಅವರನ್ನು ಗೃಹ ಬಂಧನದಿಂದ ಬಿಡುಗಡೆಮಾಡಲಾಗುವುದು.
ಕೇಂದ್ರ ಸರ್ಕಾರ ಕಳೆದ ವರ್ಷದ ಆಗಸ್ಟ್ 5 ರಂದು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನ ವಿಧಿ 370 ರದ್ದುಪಡಿಸಿ, ವ್ಯಾಪಕ ನಿರ್ಬಂಧಗಳನ್ನು ಜಾರಿಗೊಳಿಸಿದ ನಂತರ ಪುತ್ರ ಓಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕೀಯ ನಾಯಕರೊಂದಿಗೆ ೮೩ ವರ್ಷದ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT