ದೆಹಲಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಅವಕಾಶ ಕೊಡುವುದಿಲ್ಲ: ಮನೀಶ್ ಸಿಸೋಡಿಯಾ
ದೇಶದಲ್ಲಿ ಪ್ರಸ್ತುತ ಕರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಐಪಿಎಲ್ ಸೇರಿದಂತೆ ರಾಷ್ಟ್ರರಾಜಧಾನಿಯಲ್ಲಿ ಯಾವುದೇ ಕ್ರೀಡಾ ಚಟುವಟಿಕೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ನವದೆಹಲಿ: ದೇಶದಲ್ಲಿ ಪ್ರಸ್ತುತ ಕರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಐಪಿಎಲ್ ಸೇರಿದಂತೆ ರಾಷ್ಟ್ರರಾಜಧಾನಿಯಲ್ಲಿ ಯಾವುದೇ ಕ್ರೀಡಾ ಚಟುವಟಿಕೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ಈ ಬಾರಿಯ ಐಪಿಎಲ್ ನಡೆಯುವ ಕುರಿತು ಅನುಮಾನ ಇನ್ನಷ್ಟು ಹೆಚ್ಚಾದಂತಾಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಸಿಸೋಡಿಯಾ, "ಐಪಿಎಲ್ ನಂತಹ ಅಪಾರ ಜನ ಸಮೂಹ ಸೇರುವ ಎಲ್ಲ ಕ್ರೀಡಾ ಚಟುವಟಿಕೆಗಳನ್ನು ನಿಷೇಧಿಸಲು ನಾವು ನಿರ್ಧರಿಸಿದ್ದೇವೆ. ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರವು ಮುಖ್ಯವಾಗುತ್ತದೆ" ಎಂದಿದ್ದಾರೆ.
ದೆಹಲಿ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಎಂಪಿ ಸಂಜಯ್ ಸಿಂಗ್ ಸಹ ಸ್ವಾಗತಿಸಿದ್ದು, ಕೊರಾನಾ ವೈರಸ್ ತಡೆಗಟ್ಟಲು ಜನ ಸಮೂಹ ಸೇರುವುದನ್ನು ತಡೆಗಟ್ಟುವುದು ಒಂದು ಕ್ರಮವಾಗಿದೆ ಎಂದಿದ್ದಾರೆ.
ಮಾರ್ಚ್ 29 ರಂದು ಆರಂಭವಾಗಬೇಕಿರುವ ಐಪಿಎಲ್ ವೇಳಾಪಟ್ಟಿಯಲ್ಲಿ ದೆಹಲಿ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದ ಆತಿಥ್ಯದಲ್ಲಿ ಏಳು ಪಂದ್ಯಗಳು ನಿಗದಿಯಾಗಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.